ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆ ಹೆಚ್ಚಲಿ: ಸಿದ್ದರಾಮಯ್ಯ

ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Feb 9, 2022, 01:54 PM IST
  • ಹಿಜಾಬ್ ವಿವಾದ ಹೊತ್ತಿ ಉರಿಯತೊಡಗಿದ ನಂತರ SDPI-PFI ಇರಬಹುದೆಂಬ ಶಂಕೆ ಮೂಡಿದೆಯಂತೆ
  • ಇಲ್ಲಿಯವರೆಗೆ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು?
  • ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು
ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆ ಹೆಚ್ಚಲಿ: ಸಿದ್ದರಾಮಯ್ಯ  title=
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ರಾಜ್ಯ ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಸಂಘರ್ಷದ ಹಿಂದೆ PFI  ಸಂಘಟನೆ ಶಂಕೆ ಇದೆ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

‘ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ(Karnataka Hijab Row) ಹೊತ್ತಿ ಉರಿಯತೊಡಗಿದ ನಂತರ  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಇದರ ಹಿಂದೆ SDPI-PFI ಇರಬಹುದೆಂಬ ಶಂಕೆ ಮೂಡಿದೆಯಂತೆ. ಇಲ್ಲಿಯವರೆಗೆ ಇವರ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು?’ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Hijab Controversy: ಕರ್ನಾಟಕದಲ್ಲಿ ಮೂರು ದಿನಗಳು ಶಾಲೆ ಬಂದ್, ಹೈಕೋರ್ಟ್ ಹೇಳಿದ್ದೇನು?

‘ಗೃಹಸಚಿವ ಆರಗ ಜ್ನಾನೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ PFI ಮೇಲೆ ಶಂಕೆಯಂತೆ. ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು’ ಅಂತಾ ಹೇಳಿದ್ದಾರೆ.

‘SDPIಯೋ, PFIಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ?’ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ, ಆನ್‌ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ

‘ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ’ ಅಂತಾ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಆಗ್ರಹಿಸಿದ್ದಾರೆ.

‘ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ(BJP Govt.) ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ-ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ದ ಕ್ರಮ ಯಾವಾಗ?’ ಅಂತಾ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News