ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆ ಹೆಚ್ಚಲಿ: ಸಿದ್ದರಾಮಯ್ಯ
ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ರಾಜ್ಯ ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಸಂಘರ್ಷದ ಹಿಂದೆ PFI ಸಂಘಟನೆ ಶಂಕೆ ಇದೆ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
‘ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ(Karnataka Hijab Row) ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಇದರ ಹಿಂದೆ SDPI-PFI ಇರಬಹುದೆಂಬ ಶಂಕೆ ಮೂಡಿದೆಯಂತೆ. ಇಲ್ಲಿಯವರೆಗೆ ಇವರ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು?’ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Hijab Controversy: ಕರ್ನಾಟಕದಲ್ಲಿ ಮೂರು ದಿನಗಳು ಶಾಲೆ ಬಂದ್, ಹೈಕೋರ್ಟ್ ಹೇಳಿದ್ದೇನು?
‘ಗೃಹಸಚಿವ ಆರಗ ಜ್ನಾನೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ PFI ಮೇಲೆ ಶಂಕೆಯಂತೆ. ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು’ ಅಂತಾ ಹೇಳಿದ್ದಾರೆ.
ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ, ಆನ್‌ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ
‘ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ’ ಅಂತಾ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಆಗ್ರಹಿಸಿದ್ದಾರೆ.
BJP Govt.) ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ-ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ದ ಕ್ರಮ ಯಾವಾಗ?’ ಅಂತಾ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.