́Health Department Employees Protest: 30ನೇ ದಿನಕ್ಕೆ ಕಾಲಿಟ್ಟ ಒಳಗುತ್ತಿಗೆ ಆರೋಗ್ಯ ಸಿಬ್ಬಂದಿಗಳ ಮುಷ್ಕರʼ
Health Department : ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.
ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದುವರಿದ ಒಳಗುತ್ತಿಗೆ ಆರೋಗ್ಯ ಸಿಬ್ಬಂದಿಗಳ ಮುಷ್ಕರ 30ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೌಕರರು ಹೋರಾಟ ತೀವ್ರಗೊಳಿಸಿದ್ದಾರೆ.
ಇದನ್ನೂ ಓದಿ: Mandya: ನೆಚ್ಚಿನ ನಾಯಕನಿಗೆ ಹಾರ ಹಾಕುವ ಬರದಲ್ಲಿ ಅಭಿಮಾನಿಗಳಿಂದ ಎಡವಟ್ಟು!
ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಡಿಸಿ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗೆ ದಯಾಮರಣ ಬರೆಯುತ್ತೇವೆ ಎಂದು ನೌಕರರು ಹೇಳಿದ್ಧಾರೆ. ಒಂದೆಡೆ ಕ್ಯಾರೆ ಅನ್ನದ ಸರ್ಕಾರದ ವಿರುದ್ದ ಧ್ವನಿ ಎತ್ತವ ವರ್ಗವಾದರೇ ಪುಟ್ಟ ಪುಟ್ಟ ಕಂದಮ್ಮಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ನೌಕರರು ಸಂಕಷ್ಟ ಒಂದೆಡೆಯಾಗಿದೆ.
ಇದನ್ನೂ ಓದಿ: ಭಾರತವೆಂದರೆ ಕೇವಲ ಹಿಂದಿ ಭಾಷೆಯಲ್ಲ- ನಟಿ ರಮ್ಯಾ
ಖಾಯಂಗೊಳಿಸುವವರೆಗೆ ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಆರೋಗ್ಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಇಷ್ಟಗಿಯೂ ಮನವಿಗೆ ಸ್ಪಂದಿಸದೇ ಹೋದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ಕರೆ ನೀಡಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.