ಈ ಷರತ್ತಿನ ಮೇಲೆ ಸಿಟಿ ರವಿಯನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶಿಸಿದ ಹೈಕೋರ್ಟ್: ಏನದು?
High Court order for CT Ravi release: ಈ ಕುರಿತಾಗಿ ತಮ್ಮ ವಿರುದ್ಧ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಮತ್ತು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿಟಿ ರವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
High Court order for CT Ravi release: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಕುರಿತಾಗಿ ತಮ್ಮ ವಿರುದ್ಧ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಮತ್ತು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿಟಿ ರವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಸಿಟಿ ರವಿ ಸಲ್ಲಿಸಿದ ಅರ್ಜಿಯನ್ನು ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಸಿಟಿ ರವಿ ಪರ ವಕೀಲ ಸಂದೇಶ್ ವಾದ ಮಂಡಿಸಿ ಆರೋಪಿ ಹಾಗೂ ದೂರುದಾರೆ ಇಬ್ಬರು ರಾಜಕೀಯ ಮುಖಂಡರು. ಪ್ರಕರಣ ಸಂಬಂಧ ಅರ್ಜಿದಾರರಿಗೆ ಪೊಲೀಸರು ನೋಟಿಸ್ ನೀಡದೇ ಅಕ್ರಮವಾಗಿ ಬಂಧಿಸಿದ್ದಾರೆ. ಆರೋಪಗಳಿಗೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿದೆ. 41 ಎ ಅಡಿ ಕಡ್ಡಾಯವಾಗಿ ನೋಟಿಸ್ ನೀಡಬೇಕಿತ್ತು. ಅಲ್ಲದೇ, ಅವರ ಬಂಧನಕ್ಕೆ ಆಧಾರ ಒದಗಿಸಿಲ್ಲ. ಬಂಧನಕ್ಕೂ ಮೊದಲು ಪೊಲೀಸರು ಸಮರ್ಪಕ ಕಾರಣಗಳನ್ನು ನೀಡಬೇಕಿತ್ತು. ಆದರೆ ಪೊಲೀಸರು ಈ ಬಗ್ಗೆ ದಾಖಲೆಗಳಲ್ಲಿಯೂ ಉಲ್ಲೇಖಿಸಿಲ್ಲ. ಬಂಧಿಸುವ ಸಂದರ್ಭ ಪೊಲೀಸರು ಹಲ್ಲೆ ನಡೆಸಿದ್ದರಿಂದ ಅರ್ಜಿದಾರರಿಗೆ ಗಾಯಗಳಾಗಿವೆ. ಒಟ್ಟಾರೆಯಾಗಿ ಪೂರ್ಣ ಪ್ರಕ್ರಿಯೆ ಕಾನೂನಿಗೆ ಬಾಹಿರವಾಗಿದ್ದು ಪ್ರಕರಣ ರದ್ದುಗೊಳಿಸಬೇಕು ಹಾಗೂ ಅರ್ಜಿದಾರರನ್ನು ಈ ಕೂಡಲೇ ಬಂಧನ ಮುಕ್ತಗೊಳಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿಯ ಬಗ್ಗೆ ಏನು ಹೇಳುತ್ತೀರಿ? ಬಂಧನಕ್ಕೆ ಕಾರಣ ತಿಳಿಸದೇ ನೀವು ಹೇಗೆ ಬಂಧಿಸಿದ್ದಿರಿ? ಗಂಭೀರ ಅಪರಾಧ ಪ್ರಕರಣಗಳಲ್ಲೂ ಪೊಲೀಸರು ವರ್ಷಗಟ್ಟಲೆ ಬಂಧಿಸುವುದಿಲ್ಲ. ವ್ಯಕ್ತಿಯ ಸ್ವಾತಂತ್ರ್ಯ ಹರಣವಾದಾಗ ಅದನ್ನು ರಕ್ಷಿಸುವುದು ಹೈಕೋರ್ಟ್ ಕರ್ತವ್ಯ. ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿ ಬಳಿಕ ಅವರನ್ನು ನಡೆಸಿಕೊಂಡ ಬಗೆ ಮತ್ತು ಅವರ ಮೇಲಾಗಿರುವ ಹಲ್ಲೆಯ ಬಗ್ಗೆ ಏನು ಉತ್ತರಿಸುತ್ತೀರಿ? ಎಂದು ಸರ್ಕಾರಿ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿತ್ತು.
ಮುಂದುವರಿದು, ದೂರುದಾರರು ಮತ್ತು ಅರ್ಜಿದಾರರು ಇಬ್ಬರೂ ಜನಪ್ರತಿನಿಧಿಗಳು. ಅವರಿಬ್ಬರೂ ನಮ್ಮ ನಾಯಕರು. ವಿಧಾನ ಪರಿಷತ್‌ನಲ್ಲಿ ಈ ರೀತಿಯಾಗಿರುವುದು ದುರದೃಷ್ಟಕರ ಸಂಗತಿ ಎಂದು ಪೀಠವು ಮೌಖಿಕವಾಗಿ ಅಸಮಾಧಾನ ಹೊರಹಾಕಿತು.
ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಎ ಬೆಳ್ಳಿಯಪ್ಪ ವಾದ ಮಂಡಿಸಿ ರವಿ ಅವರನ್ನು ಟ್ರಾನ್ಸಿಟ್ ರಿಮ್ಯಾಂಡ್ ಮೇಲೆ ಬೆಂಗಳೂರಿಗೆ ಕರೆತರಲಾಗುತ್ತಿದೆ. ಜಾಮೀನು ಕೋರಿ ಅವರು ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು. ಬಂಧನ ಅಕ್ರಮ ಎನ್ನುವುದಾದರೆ ಅವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಿ ಎಂದರು.
ಜತೆಗೆ ಪ್ರಕರಣ ಸಂಬಂಧ ಅರ್ಜಿದಾರರು ಪೊಲೀಸ್ ಕಸ್ಟಡಿಯಲ್ಲಿ ಮನಬಂದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಪೊಲೀಸರು ಬೇಡಿದರೂ ಅವರು ತನಿಖೆಗೆ ಸಹಕರಿಸಿರಲಿಲ್ಲ. ಸ್ವತಂತ್ರ ಹೋರಾಟಗಾರರಂತೆ ಪೊಲೀಸ್ ಕಸ್ಟಡಿಯಲ್ಲಿ ವರ್ತಿಸಿದ್ದಾರೆ ಈ ತುಣುಕು ದೃಶ್ಯ ಮಾಧ್ಯಮದಲ್ಲೂ ಪ್ರಸಾರವಾಗಿದೆ ಎಂದು ಎಸ್.ಎ ಬೆಳ್ಳಿಯಪ್ಪ ವಿವರಣೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಆಘಾತ !8 ನೇ ವೇತನ ಆಯೋಗ ಜಾರಿ ಇಲ್ಲ ! ಇನ್ನು ಮುಂದೆ ಈ ನಿಯಮದಡಿ ವೇತನ ಹೆಚ್ಚಳ
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ ರಾಜ್ಯದ ಜನತೆಯ ದೃಷ್ಟಿಯಿಂದ ಆರೋಪಿತ ಘಟನೆಯು ಅಹಿತಕರ ಸಂಗತಿಯಾಗಿದೆ. ರವಿ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಅವರು ತನಿಖೆಗೆ ಲಭ್ಯವಾಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಬೆಳಗಾವಿಯ ಸುವರ್ಣ ಸೌಧದ ವಿಧಾನ ಪರಿಷತ್‌ನಲ್ಲಿ ನಡೆದಿರುವ ಘಟನೆಯ ಬಗ್ಗೆ ಸಭಾಪತಿಗಳು ಏನನ್ನೂ ಉಲ್ಲೇಖಿಸಿಲ್ಲ. ರವಿ ಅವರು ತಕ್ಷಣ ಬಿಡುಗಡೆ ಸಂಬಂಧಿತ ಮಧ್ಯಂತರ ಕೋರಿಕೆಗೆ ಅರ್ಹರಾಗಿದ್ದಾರೆ. ಹೀಗಾಗಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ. ಜತೆಗೆ ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ