ಬೆಂಗಳೂರು: ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಅವರು ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಈ ಮುಂದೆ ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ.
ಇದನ್ನೂ ಓದಿ-ಚಳಿಗಾಲದಲ್ಲಿ ಕೇವಲ 20 ರೂ.ಗಳಿಗೆ ಸಿಗುವ ಈ 5 ತರಕಾರಿಗಳು ಇಡೀ ಋತುವಿನಲ್ಲಿ ನಿಮ್ಮ ಮಧುಮೇಹ ನಿಯಂತ್ರಣದಲ್ಲಿಡುತ್ತವೆ!
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ. ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ-ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ತೂಕ ಇಳಿಕೆಗೆ ಈ ಲಡ್ಡು ನಿಮ್ಮ ದೈನಂದಿನ ಆಹಾರದಲ್ಲಿರಲಿ!
ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.