ಸುಪ್ರೀಂ ಕೋರ್ಟ್ ಕದ ತಟ್ಟಿದ ಹಿಜಾಬ್ ವಿವಾದ ಪ್ರಕರಣ, ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ
ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ನವದೆಹಲಿ : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸುವ ವಿಚಾರದ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ (Supreme court) ಕದ ತಟ್ಟಿದೆ. ಕರ್ನಾಟಕ ಹೈಕೋರ್ಟ್‌ನ (Karnataka high court) ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಕರ್ನಾಟಕ ಹೈ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಈ ಆದೇಶವನ್ನು ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
'ಧಾರ್ಮಿಕ ಉಡುಪು ಧರಿಸಲು ಅವಕಾಶವಿಲ್ಲ'
ವಿಚಾರಣೆ ವೇಳೆ ಪೀಠದ ಅಧ್ಯಕ್ಷ, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವಂತೆ ಸೂಚಿಸಿದ್ದರು. ಆದರೆ ಸಮಸ್ಯೆ ಬಗೆಹರಿಯುವವರೆಗೂ ಧಾರ್ಮಿಕ ಉಡುಗೆ ತೊಡಲು ಅವಕಾಶ ಇಲ್ಲ ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಕೋರ್ಟ್ (Karnataka high court) ಹೇಳಿತ್ತು. ‘ತೀರ್ಪು ಇತ್ಯರ್ಥವಾಗುವವರೆಗೆ ಶಾಲಾ-ಕಾಲೇಜು ಆವರಣದಲ್ಲಿ ಧಾರ್ಮಿಕ ಬಟ್ಟೆಗಳಾದ ಹಿಜಾಬ್ (Hijab) ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ’ ಎಂದು ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣ ಇತ್ಯರ್ಥವಾಗುವವರೆಗೆ ಎಲ್ಲವನ್ನೂ ತಡೆಯಬೇಕಾಗುತ್ತದೆ. ಯಾಕೆಂದರೆ ರಾಜ್ಯದಲ್ಲಿ ಶಾಂತಿ ನೆಲೆಸಬೇಕು ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ : ಫೆ.18, 19, 20 ರಂದು ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆ
ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಒತ್ತಾಯ ಸಾಧ್ಯತೆ :
ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರ ಪರವಾಗಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ. ಬೆಂಗಳೂರಿನ ಮೊ.ಆರಿಫ್ ಅಲ್ಲದೆ ಕರ್ನಾಟಕದ ಮಸೀದಿ, ಮದರಸಾಗಳ ಸಂಘಟನೆಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿದಾರರು ಇಂದು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಪ್ರಕರಣದ ವಿಚಾರಣೆ ನಡೆಸುವಂತೆ ಒತ್ತಾಯಿಸಬಹುದು.
ಇಡೀ ವಿಷಯ ಏನು?
ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಕಾಲೇಜು ಆಡಳಿತ ಮಂಡಳಿಯ ನಿಯಮಕ್ಕೆ ವಿರುದ್ಧವಾಗಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ (Hijab Contraversy) ಧರಿಸಿ ಕಾಲೇಜಿಗೆ ಬಂದಿದ್ದರು. ಇದಾದ ನಂತರ ಕರ್ನಾಟಕದ ಇತರ ಕಾಲೇಜುಗಳಲ್ಲೂ ಹಿಜಾಬ್ ವಿವಾದ ಆರಂಭವಾಯಿತು. ಹಿಜಾಬ್ ಗೆ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲುಗಳೊಂದಿಗೆ ಶಾಲೆ ಮತ್ತು ಕಾಲೇಜಿಗೆ ಬರಲು ಪ್ರಾರಂಭಿಸಿದರು. ಹೀಗೆ ಈ ವಿವಾದವು ಜೋರಾಗುತ್ತಲೇ ಹೋಯಿತು. ಇದಾದ ನಂತರ ರಾಜ್ಯದ ಕೆಲವೆಡೆ ಕಲ್ಲು ತೂರಾಟ ನಡೆದಿರುವ ಬಗ್ಗೆಯೂ ವರದಿಯಾಗಿದೆ.
ಇದನ್ನೂ ಓದಿ : ಪುಸ್ತಕ ಬಹುಮಾನಕ್ಕೆ ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.