)
Today Weather report in kannada: ರಾಜ್ಯದ ಕರಾವಳಿ ಭಾಗ ಹೊರತುಪಡಿಸಿ ಮಿಕ್ಕೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ನಡುವೆ ಧಾರವಾಡ, ಗದಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಮಾಡಿದೆ.
ಎರಡು ದಿನಗಳವರೆಗೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ. ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದರೂ, ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐಎಂಡಿ ಅಪ್ಡೇಟ್ ಪ್ರಕಾರ, ಧಾರವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಿದ್ದು, ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ. ಇಂದು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ನಿನ್ನೆ ಮಳೆ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣವಿತ್ತು. ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ, ಕರಾವಳಿ ಪ್ರದೇಶಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ಇನ್ನು ಶಾಲೆಗಳಿಗೆ ರಜೆ ಇದೆಯೋ ಇಲ್ಲವೋ ಎಂಬುದು ಆಯಾಯ ಜಿಲ್ಲೆಯ ಅಧಿಕಾರಿಗಳಿಗೆ ಸಂಬಂಧಿಸಿದ ನಿರ್ಧಾರವಾಗಿದೆ.