ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವರು ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತ್ರ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಹುದು. ಅದನ್ನು ಬಿಟ್ಟು ರಾಜಕೀಯ ವಿಷಯಗಳ ಬಗ್ಗೆ ಯಾವುದೇ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ತಾಕೀತು ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಸಮನ್ವಯ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಎರಡೂ ಪಕ್ಷಗಳಿಗೆ ಸೇರಿದಂತೆ ಸರ್ಕಾರದ ಪರವಾಗಿ ಒಬ್ಬರೇ ಮುಖ್ಯ ಸಚೇತಕರು ಇರುತ್ತಾರೆ. ಆದರೆ, ಎರಡೂ ಪಕ್ಷಗಳ ಮಾಹಿತಿ ನೀಡಲು ಎರಡೂ ಪಕ್ಷಗಳಿಂದ ಇಬ್ಬರು ವಕ್ತಾರರನ್ನು  ನೇಮಕ ಮಾಡಲಾಗುತ್ತದೆ. ಹೀಗಾಗಿ ಪಕ್ಷಗಳ ಸಮನ್ವಯತೆಗೆ ಸಂಬಂಧಿಸಿದಂತೆ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡುವುದನ್ನು ನಿರ್ಬಂಧಿಸಲಾಗುತ್ತದೆ ಎಂದು ಹೇಳಿದರು.


ರೈತರ ಸಾಲ ಮನ್ನಾವನ್ನು ಕಾಂಗ್ರೆಸ್ ಎಂದೂ ವಿರೋಧಿಸಿಲ್ಲ. ಜತೆಗೆ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ವೇಣುಗೋಪಾಲ್ ಇದೇ ಸಂದರ್ಭದಲ್ಲಿ ತಿಳಿಸಿದರು.