ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮಾತನಾಡಿ ಮೋದಿಯನ್ನ ಟೀಕಿಸಿದ ಹಿನ್ನೆಲೆಯಲ್ಲಿ ಪುಂಡರ ಗುಂಪೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.‌ಮೆಜೆಸ್ಟಿಕ್ ನ ಕೆಎಎಸ್ ಆರ್ ಟಿಸಿ ನಿಲ್ದಾಣದ ಬಳಿ ಘಟನೆ ನಡೆದಿದೆ. ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ.ಯುವಕನೊಬ್ಬ ಪ್ರಧಾನಿ ಮೋದಿಯನ್ನು ಟೀಕಿಸಿ ಸಿದ್ದರಾಮಯ್ಯ ಜನಪರ ಕೆಲಸ ಮಾಡುತ್ತಿದ್ದಾರೆ ಎಂದು ಹಾಡಿ ಹೊಗಳಿರುವುದೇ ಈ ಹಲ್ಲೆಯ ಹಿಂದಿನ ಕಾರಣ. 


COMMERCIAL BREAK
SCROLL TO CONTINUE READING

ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಮೇಲೆ ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ. 


ಇದನ್ನೂ ಓದಿ : ನಿರಂತರ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಸಾವು- ಮಕ್ಕಳು ಪಾರು


ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ  ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಬೆದರಿಕೆ ಹಾಕಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಳ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 


ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.


ಇದನ್ನೂ ಓದಿ : 2019ರ ಮಳೆಗೆ ಹಾನಿ.. ಇಂದಿಗೂ ಸಿಗದ ಪರಿಹಾರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.