ರೈತರನ್ನು ಉಗ್ರರು ಎಂದು ಕರೆಯುವ ಮೂಲಕ ಮೋದಿ ಸರ್ಕಾರ ರೈತ ಸಮುದಾಯಕ್ಕೆ ಅವಮಾನ ಮಾಡಿದೆ
ರೈತ ಹೋರಾಟಗಾರರನ್ನು ಉಗ್ರರು ಎಂದು ಕರೆಯುವ ಮೂಲಕ ಮೋದಿ ಸರ್ಕಾರ ರೈತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರು: ರೈತ ಹೋರಾಟಗಾರರನ್ನು ಉಗ್ರರು ಎಂದು ಕರೆಯುವ ಮೂಲಕ ಮೋದಿ ಸರ್ಕಾರ ರೈತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ ಉದ್ದಟತನ ಮತ್ತು ಅಪ್ರಮಾಣಿಕತೆಯನ್ನು ಪ್ರದರ್ಶಿಸಿದೆ.
ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ- ಸಿದ್ಧರಾಮಯ್ಯ ವಾಗ್ದಾಳಿ
ಒಂದೆಡೆ ಗಂಭೀರವಾಗಿ ಮಾತುಕತೆಯನ್ನು ನಡೆಸದೆ, ಇನ್ನೊಂದೆಡೆ ರೈತ ಹೋರಾಟಗಾರರನ್ನು ಭಯೋತ್ಪಾದಕರು, ಉಗ್ರಗಾಮಿಗಳು ಎಂದೆಲ್ಲ ದೂಷಿಸುತ್ತಿರುವ ನರೇಂದ್ರ ಮೋದಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ.
ಕುರುಬರ ಎಸ್ಟಿ ಹೋರಾಟದ ಹಿಂದೆ ಬಿಜೆಪಿ, ಆರ್‌ಎಸ್ಎಸ್‌ನ ಕೈವಾಡವಿದೆ-ಸಿದ್ಧರಾಮಯ್ಯ
ದಲಿತರ ಪರ, ಮಾನವಹಕ್ಕುಗಳ ಪರವಾಗಿ ಹೋರಾಡುವವರನ್ನು ‘ಅರ್ಬನ್ ನಕ್ಸಲ್’ಗಳೆಂದು, ಕೋಮುವಾದದ ವಿರುದ್ಧ ಹೋರಾಡುವವರನ್ನು ದೇಶದ್ರೋಹಿಗಳೆಂದು ದೂಷಿಸುತ್ತ ಬಂದ ನರೇಂದ್ರ ಮೋದಿ ಸರ್ಕಾರ, ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ.
ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಿದ್ದೇವೆ ಎಂದು ಇಲ್ಲಿಯ ವರೆಗೆ ಬಡಾಯಿ ಬಿಡುತ್ತಾ ಬಂದ ಬಿಜೆಪಿ, ಈಗ ದೆಹಲಿಯಲ್ಲಿನ ರೈತ ಹೋರಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಕಾಂಗ್ರೆಸ್ ಪಕ್ಷ ರೈತ ಹೋರಾಟಗಾರರ ಹಿಂದೆ ಇಲ್ಲ, ಅವರ ಜೊತೆಯಲ್ಲಿದೆ.
ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಈಗ ಬೆಂಬಲ ಬೆಲೆಯನ್ನೂ ನೀಡದೆ ಸರ್ಕಾರ ಕೈತೊಳೆದುಕೊಂಡಿದೆ-ಸಿದ್ಧರಾಮಯ್ಯ
ನರೇಂದ್ರ ಮೋದಿ ಸರ್ಕಾರ , ರೈತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷಿಸುವ ದುಸ್ಸಾಹಸಕ್ಕೆ ಇಳಿಯದೆ, ತಕ್ಷಣ ಕೃಷಿಕ್ಷೇತ್ರಕ್ಕೆ ಮಾರಕವಾಗಿರುವ ಮೂರು ‘ಕಪ್ಪು ಕಾನೂನು’ಗಳನ್ನು ರದ್ದುಗೊಳಿಸಿ ಈಗಿನ ಬಿಕ್ಕಟ್ಟನ್ನು ಶಾಂತಿಯುತವಾಗಿ ಪರಿಹರಿಸಬೇಕು. ಸರ್ಕಾರದ ನಿರ್ಲಕ್ಷದಿಂದ ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ಮೋದಿಯವರೇ ಕಾರಣರಾಗುತ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.