ರಾಜ್ಯ ಸರ್ಕಾರದ ಬಹು ನಿರೀಕ್ಷಿತ `ಗೃಹ ಲಕ್ಷ್ಮಿ` ಯೋಜನೆಗೆ ಜುಲೈ 19 ರಂದು ಚಾಲನೆ
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗೆ ಜುಲೈ 19 ರಂದು ಚಾಲನೆ ದೊರೆಯಲಿದೆ.
ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ದೊರೆಯಲಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ
ಈ ಮಹತ್ವದ ಯೋಜನೆಗೆ ಸೋನಿಯಾ ಗಾಂಧಿ ಚಾಲನೆ ನೀಡಬೇಕಾಗಿತ್ತು ಆದರೆ ಈಗ ಸಮಯಾವಕಾಶ ಸಿಗದಿರುವ ಹಿನ್ನೆಲೆಯಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ
ಯಾರಿಗೆಲ್ಲಾ ಸಿಗುತ್ತೆ ಗೃಹಲಕ್ಷ್ಮಿ ಯೋಜನೆ ಕೊಡುಗೆ?
ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ.
ಗೃಹಲಕ್ಷ್ಮಿ ಯೋಜನೆ ಉದ್ದೇಶ?
* ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ.
* ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ.
* ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ.
* ಇದರಿಂದ ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ.
* ಪಶುಪಾಲನೆ, ಗುಡಿ ಕೈಗಾರಿಕೆಯಂತಹ ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ.
* ಗರ್ಭಿಣಿಯರು, ತಾಯಂದಿರು, ಮಹಿಳಾ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತ ಮಹಿಳೆಯರು ಕೆಲಸ ಮಾಡುವ ಅನಿವಾರ್ಯತೆಯನ್ನು ನಿವಾರಿಸುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.