ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಈಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ.


COMMERCIAL BREAK
SCROLL TO CONTINUE READING

ಕಳೆದ ಎರಡು ಮೂರು ದಿನಗಳಿಂದ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕೆಂದು ಕೋರಿ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದರು.ಈಗ ಪ್ರತಿಭಟನೆಗೆ ಮಣಿದಿರುವ ಪಾಲಿಕೆ ಅಂತಿಮವಾಗಿ ಮೂರು ದಿನಗಳ ಆಚರಣೆಗೆ ಅವಕಾಶ ನೀಡಿದೆ.ಗಣಪತಿ ಉತ್ಸವದ ವೇಳೆ ಕಳೆದ ವರ್ಷದ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.ಈಗ ಸಂಜು ಬಡಾಸ್ಕರ್ ನೇತೃತ್ವದ ರಾಣಿ ಚೆನ್ನಮ್ಮ ಗಣೇಶ ಮಹಾಮಂಡಳಕ್ಕೆ ಗಣೇಶ್ ಪ್ರತಿಷ್ಟಾಪಣೆಗೆ ಅನುಮತಿ ನೀಡಲಾಗಿದೆ.


ಇದನ್ನೂ ಓದಿ- ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ: ಸಿಎಂ ಪತ್ರ


ಈಗ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅವಕಾಶ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಮಹೇಶ್ ತೆಂಗಿನಕಾಯಿ "ಕಾಂಗ್ರೆಸ್ ಹಿಂಬಾಗಿಲಿನಿಂದ ಅಂಜುಮನ್ ಸಂಸ್ಥೆ ಮೂಲಕ ಕೋರ್ಟ್ ರೀಟ್ ಅರ್ಜಿ ಸಲ್ಲಿಸಿದೆ.ಕೊನೆ ಕ್ಷಣದಲ್ಲಿಯಾದ್ರೂ ಸರ್ಕಾರ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ,ಮುಂದೆ ಕೂಡ ಹಿಂದ ಹಬ್ಬಗಳ ಆಚರಣೆಗೆ ಅಡೆತಡೆಗಳ ಒಡ್ಡಬಾರದು.ನ್ಯಾಯಾಲಯ ಅತ್ಯುತ್ತಮ ತೀರ್ಪು ಕೊಟ್ಟಿದೆ, ನಮಗೆ ದೊಡ್ಡ ಜಯ ಸಿಕ್ಕಿದೆ.ಈದ್ಗಾ ಮೈದಾನದಲ್ಲಿ ವಿಜ್ರಂಭಣೆಯಿಂದ ಹಬ್ಬ ಆಚರಣೆ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ- ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು: ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು- ಎಚ್‌ಡಿ‌ಕೆ


ಇನ್ನೊಂದೆಡೆಗೆ ಶಾಸಕ ಅರವಿಂದ ಬೆಲ್ಲದ ಮಾತನಾಡಿ "ನ್ಯಾಯಾಲಯ ಅನುಮತಿ ಕೊಟ್ಟ ನಂತರವೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ತುಚ್ಚಿಕರಣ ರಾಜಕಾರಣ ಮಾಡುತ್ತಿದೆ.ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿಯೂ ಠರಾವು ಮಾಡಲಾಗಿತ್ತು.ಅಂಜುಮನ್ ಸಂಸ್ಥೆ ಮೇಲಿಂದ ಮೇಲೆ ಕೋರ್ಟಿಗೆ ಹೋಗುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯತ್ನ ಮಾಡಿದೆ.ಮೇಲಿಂದ ಮೇಲೆ ಕೋರ್ಟ್ ಗೆ ಹೋಗಿ ಸಮಾಜದಲ್ಲಿರುವ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ.ಕೊನೆಗೂ ನ್ಯಾಯಾಲಯದಿಂದಾಗಿ ನಮಗೆ ಅನುಮತಿ ಸಿಕ್ಕಿದೆ.ಇದು ಗಣಪತಿ ಭಕ್ತರ ಗೆಲುವು.ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ.ಅದನ್ನು ಗಮನದಲ್ಲಿಟ್ಟುಕೊಂಡು ಅವರು ಕೆಲಸ ಮಾಡಬೇಕಿತ್ತು.ಆದರೆ ಅಲ್ಪಸಂಖ್ಯಾತರ ಓಲೈಕೆಗೆ ಅದು ಮುಂದಾಗಿತ್ತುಈಗಲಾದರೂ ಸರ್ಕಾರ ಯಾವುದೇ ರೀತಿ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.