`ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಸುಳ್ಳು`-ಸಿಎಂ ಸಿದ್ದರಾಮಯ್ಯ
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಕುದುರೆ ಹತ್ತಿ ಫುಡ್ ಡೆಲಿವರಿಗೆ ಹೊರಟ ಝೊಮಾಟೋ ಡೆಲಿವರಿ ಬಾಯ್...
2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು.2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.
ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ದಿನ ಅಯೋಧ್ಯೆಯಲ್ಲಿ ಬಿಗಿ ಭದ್ರತೆ: ಎಲ್ಲಿಲ್ಲೆ ಹೇಗಿರಲಿದೆ ಗೊತ್ತಾ ಸೆಕ್ಯೂರಿಟಿ?
ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು.ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.