ಬೆಂಗಳೂರು: ಜಾತಿ ಗಣತಿ(Caste Census in Karnataka)ಯ ಉದ್ದೇಶ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುವುದಾಗಿರಲಿಲ್ಲ. ಅದೊಂದು ಸಿದ್ದರಾಮಯ್ಯರ ಚುನಾವಣಾ ತಂತ್ರಗಾರಿಕೆಯಾಗಿತ್ತು ಎಂದು ಬಿಜೆಪಿ(BJP) ಆರೋಪಿಸಿದೆ. ಭಾನುವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಸಿದ್ದರಾಮಯ್ಯ(Siddaramaiah)ನವರೇ ನಿಮ್ಮ ಸುಳ್ಳಿನ ವ್ಯಾಪ್ತಿ ಎಷ್ಟು ವಿಸ್ತಾರವಾಗಿದೆ!!! ರಾಜ್ಯವನ್ನು ಜಾತಿ ಆಧಾರದ ಮೇಲೆ ಹರಿದು ಚೂರು ಮಾಡುವುದೇ ನಿಮ್ಮ ಉದ್ದೇಶವಾಗಿತ್ತು. ಸಮಾಜವನ್ನು ಅಶಾಂತಿಯ ಗೂಡಾಗಿಸಲು ನೀವು ಜಾತಿ ಗಣತಿ(Caste Census) ಆರಂಭಿಸಿದಿರಿ. ಆದರೆ ಅದಕ್ಕೆ ಸಾಮಾಜಿಕ ಹಾಗೂ ಆರ್ಥಿಕ ಗಣತಿ ಎಂಬ ಹೆಸರು ನೀಡಿದಿರಿ. ಎಂಥಹ ಸುಳ್ಳು!!?’ ಎಂದು ಬಿಜೆಪಿ ಟೀಕಿಸಿದೆ.


HD Kumaraswamy: ನಿಖಿಲ್ ನಿನಗೆ ರಾಜಕೀಯ ಬೇಡ ಎಂದ ಎಚ್.ಡಿ.ಕುಮಾರಸ್ವಾಮಿ


‘ಜಾತಿ ಗಣಿತಿ(Caste Census) ವಿಚಾರವಾಗಿ ಯಾವ ಕ್ಷೇತ್ರದಲ್ಲಿ ಯಾವ ಜಾತಿಗೆ ಸೇರಿದ ಎಷ್ಟು ಜನರಿದ್ದಾರೆ, ಕ್ಷೇತ್ರವಾರು ಧಾರ್ಮಿಕ ಪ್ರಾಬಲ್ಯ ಹೇಗಿದೆ ಎಂದು ಅಂದಾಜಿಸಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವುದಷ್ಟೇ ನಿಮ್ಮ ಉದ್ದೇಶವಾಗಿತ್ತು. ಉದ್ದೇಶ ಶುದ್ಧಿ ಇಲ್ಲದ ಯಾವ ಕಾರ್ಯವೂ ಯಶಸ್ವಿಯಾಗುವುದಿಲ್ಲ. ಇದಕ್ಕೆ ಸಿದ್ದರಾಮಯ್ಯರ ಜಾತಿ ಗಣತಿಯೇ ದೊಡ್ಡ ಉದಾಹರಣೆ. ಸಮಾಜವನ್ನು ಒಡೆಯುವುದಕ್ಕಾಗಿ ಜನರ ತೆರಿಗೆ ಹಣದಲ್ಲಿ ನೀವು ನೂರಾರು ಕೋಟಿ ವೆಚ್ಚ ಮಾಡಿದರೂ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಯ್ತು’ ಎಂದು ಬಿಜೆಪಿ(BJP) ಕುಟುಕಿದೆ.


Siddaramaiah) ಅವರ ಜಾತಿ ಗಣತಿ ವರದಿ ಸರ್ಕಾರ ಅಂಗೀಕರಿಸುವುದಕ್ಕೆ ಮುನ್ನವೇ ಬಹಿರಂಗವಾಯ್ತು. ಚುನಾವಣಾ ಆಕಾಂಕ್ಷಿಗಳು ಅದನ್ನು ಬೀದಿ ಬೀದಿಯಲ್ಲಿ ಮಾರಾಟ ಮಾಡಿದರು. ಪಾವಿತ್ರ್ಯವೇ ಇಲ್ಲದ ಈ ವರದಿಯನ್ನು ಸಿದ್ದರಾಮಯ್ಯ ಅವರು ಈಗಲೂ ರಾಜಕೀಯಕ್ಕೆ ಬಳಸುತ್ತಿದ್ದಾರೆ’ ಅಂತಾ ಬಿಜೆಪಿ ಕಿಡಿಕಾರಿದೆ.


ಇದನ್ನೂ ಓದಿ: Night Curfew In Karnataka: ಡಿಸೆಂಬರ್ 28 ರಿಂದ 10 ದಿನಗಳ ಕಾಲ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.