`ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ಶಕ್ತಿಯೇ ನನ್ನ ಗೆಲುವಿಗೆ ಕಾರಣ`
Jagadish Shtter : ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೇಸ್ ಕೈ ಹಿಡಿದು, ಬಿಜೆಪಿ ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದೆ, ಮತ್ತು ಬಿಜೆಪಿ ಲಿಂಗಾಯತ ವಿರೋಧಿ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪಕ್ಷಾಂತರಿಗಳನ್ನು ಪಕ್ಷ ಯಾವತ್ತು ಕ್ಷಮಿಸುವುದಿಲ್ಲ, ನಂಬಿಕೆ ದ್ರೋಹಿ ಎಂದೆಲ್ಲಾ ಜಗದೀಶ್ ಶೆಟ್ಟರ ಅವರನ್ನು ಆರೋಪಿಸಿದ್ದಾರೆ.
Hubli : ಈ ಎಲ್ಲ ವಾಗ್ದಾಳಿಗಳ ನಡುವೆ ಮಾಜಿ ಸಿಎಂ ಮತ್ತು ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಪಕ್ಷದ ಕಾರ್ಯಕರ್ತನ ಮನೆಗೆ ಶುಕ್ರವಾರ ಬೇಟಿ ನೀಡಿದರು. ಕಾಂಗ್ರೇಸ್ ಕಾರ್ಯಕರ್ತರಾದಂತಹ ಮಂಜುನಾಥ್ ಜಗದೀಶ್ ಶೆಟ್ಟರ್ ಅವರು ಗೆದ್ದೆ ಗೆಲ್ಲುತ್ತಾರೆ ಎಂಬ ಭರವಸೆಯ ನುಡಿಗಳನ್ನು ರಕ್ತದ ಮೂಲಕ ಬರೆದಿದ್ದಾರೆ. ಈ ವಿಚಾರವಾಗಿ ಕಾಂಗ್ರೇಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮಂಜುನಾಥ್ ಅವರ ಮನೆಗೆ ಬೇಟಿ ನೀಡಿ ಅಭಿನಂದಿಸಿದ್ದಾರೆ.
ಕಾಂಗ್ರೇಸ್ ಕಾರ್ಯಕರ್ತ ಮಂಜುನಾಥ್ ಅವರನ್ನು ಬೇಟಿ ಮಾಡಿದ ನಂತರ ಶೆಟ್ಟರ್ ಅವರು ಟ್ವಿಟರ್‌ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ "ರಕ್ತದಾನ ಶ್ರೇಷ್ಠದಾನ ಯಾರು ಸಹ ರಕ್ತವನ್ನು ವ್ಯರ್ಥ ಮಾಡಬೇಡಿ ಅವಶ್ಯಕತೆ ಇರುವವರಿಗೆ ದಾನ ಮಾಡಿ ನೂರಕ್ಕೆ ನೂರರಷ್ಟು ನಾನು ಗೆಲ್ಲುತ್ತೇನೆ ಎಂದು ತಮ್ಮ ರಕ್ತದಲ್ಲಿ ಬರೆದು ದಿಟ್ಟ ಉತ್ತರವನ್ನು ನೀಡಿದಂತಹ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶ್ರೀ ಮಂಜುನಾಥ ಯಂಟ್ರುವಿ ಅವರನ್ನು ಇಂದು ಆತ್ಮೀಯವಾಗಿ ಸನ್ಮಾನಿಸಲಾಯಿತು. ಇಂತಹ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ಶಕ್ತಿಯೇ ನನ್ನ ಗೆಲುವಿಗೆ ಮುಖ್ಯ ಕಾರಣ" ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ-ರಾಜ್ಯ ವಿಧಾನಸಭೆಗೆ ನಾಳೆಯಿಂದಲೇ ಮತದಾನ ಶುರು ! ಬ್ಯಾಲೇಟ್ ಪೇಪರ್ ವೋಟಿಂಗ್ ಗೆ ಅವಕಾಶ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೆಟ್ಟರ್ ಗೆಲ್ಲುವುದಿಲ್ಲ ಎಂದು ರಕ್ತದಲ್ಲಿ ಬರೆಯಲು ಸಿದ್ಧ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದರು. ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರು ನಂಬಿಕೆ ದ್ರೋಹಿ ನಾನು ಇನ್ನೂ ಅವರ ಹೆಸರನ್ನು ಎತ್ತುವುದಿಲ್ಲ, ಅಲ್ಲದೇ ಪಕ್ಷಾಂತರವಾದವರನ್ನು ಪಕ್ಷ ಎಂದಿಗೂ ಕ್ಷಮಿಸುವುದಿಲ್ಲ ಎಂದು ಆರೋಪಿಸಿದ್ದರು
ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಬರುವ ಚುನಾವಣೆಯಲ್ಲಿ ಶೆಟ್ಟರ್ ಮತ್ತು ಕಾಂಗ್ರೆಸ್ ಇಬ್ಬರೂ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಬರೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡ ಜಿಲ್ಲಾ ಕಾಂಗ್ರೆಸ್‌ನ ಯುವ ಘಟಕದ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗಿರುವ ಯಂಟುವಿ ಅವರು ನಾವು ಶೆಟ್ಟರ್ ಅವರ ಬೆಂಬಲವಾಗಿ ನಾವೀದ್ದೇವೆ, ಅವರು ಖಂಡಿತವಾಗಿಯೂ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರು ಕೆಟ್ಟಸಾಗಿ ನಡೆಸಿಕೊಂಡು ಪಕ್ಷ ತೊರೆಯುವಂತೆ ಮಾಡಿದ ದ್ರೋಹಕ್ಕೆ ಬಿಜೆಪಿ ಪಕ್ಷ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ-ಅಖಾಡಕ್ಕಿಳಿದ ಫ್ಯಾಮಿಲಿ: ಅಭ್ಯರ್ಥಿಗಳ ಪರ ಕುಟುಂಬಸ್ಥರ ಮತಬೇಟೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw