ಬೆಂಗಳೂರು: ಮುಖ್ಯಮಂತ್ರಿ ತವರೂರಾದ ಮೈಸೂರಿಗೆ ಫೆಬ್ರವರಿ 19ರಂದು ಎರಡು ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ.ಆದರೆ ಈ ಸರ್ಕಾರಿ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಿಲ್ಲ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಫೆಬ್ರವರಿ 18ರಂದು ರಾತ್ರಿ 11 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ ಎಂದು ಹೇಳಲಾಗಿದೆ. ಅಂದು ಮೈಸೂರಿನಲ್ಲಿಯೆ ವಾಸ್ತವ್ಯ ಹೂಡಿ, ಫೆಬ್ರವರಿ 19 ರಂದು ರೇಲ್ವೆ ಇಲಾಖೆ ಮತ್ತು ಹೆದ್ದಾರಿಗಳ  ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂರವರ ತವರಿನಲ್ಲಿಯೇ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಯಿಸಿರುವ ಕಾಂಗ್ರೆಸ್ ಪಕ್ಷದ ನಾಯಕ ದಿನೇಶ ಗುಂಡುರಾವ್ "ಇದು ಪ್ರಧಾನಿ ನರೇಂದ್ರ ಮೋದಿಯವರ ಸಣ್ಣತನವನ್ನು ತೋರಿಸುತ್ತದೆ" ಎಂದು ಕಿಡಿಕಾರಿದ್ದಾರೆ.