ಬೆಂಗಳೂರು: ಉದ್ಯಮಿ ವಿ.ಜಿ.ಸಿದ್ಧಾರ್ಥ್ ಅಗಲಿಕೆಯಿಂದ ಆಘಾತವಾಗಿದೆ. ಸಿದ್ಧಾರ್ಥ್ ಅವರ ಸಾವು ಎಷ್ಟು ದಾರುನವೋ, ಅದರ ಹಿನ್ನಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ ತಳ್ಳಿದ ಕಾರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಕೆಫೆ ಕಾಫಿ ಡೇ ಸ್ಥಾಪಕ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಉದ್ಯಮಿ ವಿ.ಜಿ.ಸಿದ್ಧಾರ್ಥ ಸಾವಿನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕೀಡಾಗಿದ್ದೇನೆ. ತಮ್ಮ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ ಅವರ ಅಗಲಿಕೆಯಿಂದ ಎಸ್.ಎಂ.ಕೃಷ್ಣ ಮತ್ತು ಕುಟುಂಬ ವರ್ಗ ಅನುಭವಿಸುತ್ತಿರುವ ನೋವು-ಸಂಕಟಗಳನ್ನು ನಾನು ಅರ್ಥಮಾಡಿಕೊಳಬಲ್ಲೆ. ಅವರ ಕುಟುಂಬಕ್ಕೆ ನನ್ನ‌ ಸಂತಾಪಗಳು ಎಂದು ತಿಳಿಸಿದ್ದಾರೆ.


ಇದರ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಸಾವು ಎಷ್ಟು ಎಷ್ಟು ದಾರುಣವೋ, ಅದರ ಹಿನ್ನೆಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ‌ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ‌ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರಿಗೆ ನಾವು  ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ.



ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ‌  ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು. ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ. ಈ ಬಗ್ಗೆ‌‌‌  ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.