ಬೆಂಗಳೂರು: 2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಸೋಮವಾರ) ಪ್ರಕಟವಾಗಲಿದೆ.


COMMERCIAL BREAK
SCROLL TO CONTINUE READING

ಮಾರ್ಚ್ 1 ರಿಂದ 17ರವರೆಗೆ ರಾಜ್ಯಾದ್ಯಂತ 2,817 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಅದರ ಫಲಿತಾಂಶ ಇಂದು(ಏ.30) ಬೆಳಿಗ್ಗೆ 11ಗಂಟೆಗೆ ಇಲಾಖೆಯ ವೆಬ್ಸೈಟ್ www.puc.kar.nic.in ಮತ್ತು http://karresults.nic.in ನಲ್ಲಿ ಪ್ರಕಟವಾಗಲಿದ್ದು, ಮೇ.1ರಂದು ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಒಟ್ಟು 6,90,150 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ. 


ಫಲಿತಾಂಶ ಪ್ರಕಟಗೊಂಡ ನಂತರ ಉತ್ತರ ಪತ್ರಿಕೆಗಳ ನಕಲು ಪ್ರತಿ ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮಂಡಳಿ ಹೇಳಿದೆ.