ಬೆಂಗಳೂರು: ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡಲು ಸಿದ್ದತೆ ನಡೆಸುತ್ತಿವೆ. ಈ ಸಂಬಂಧ ಬೆಸ್ಕಾಂ ಸೇರಿ ಇತರೆ ಕಂಪನಿಗಳು ವಿದ್ಯುತ್ ದರ ಏರಿಸುವಂತೆ ಕೆ.ಇ.ಆರ್.ಸಿ ಮುಂದೆ ಪ್ರಸ್ತಾಪ ಇಟ್ಟಿವೆ.


COMMERCIAL BREAK
SCROLL TO CONTINUE READING

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ.ದಿನ ನಿತ್ಯ ಉಪಯೋಗಿಸುವ ದವಸ ಧಾನ್ಯ ,ಪೆಟ್ರೋಲ್, ಡಿಸೇಲ್ ಗ್ಯಾಸ್ ,ಹಾಲು ಮೊಸರು ಗಗನಕ್ಕೇರಿದೆ‌.ಇದರ ನಡುವ ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ ಕಾದಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ದಿನ ಅಯೋಧ್ಯೆಯಲ್ಲಿ ಬಿಗಿ ಭದ್ರತೆ: ಎಲ್ಲಿಲ್ಲೆ ಹೇಗಿರಲಿದೆ ಗೊತ್ತಾ ಸೆಕ್ಯೂರಿಟಿ?


ಗ್ಯಾರಂಟಿ ಭಾಗ್ಯಗಳಿಗೆ ಆಗುವ ವೆಚ್ಚ ಸರಿದೂಗಿಸಲು ಬೆಲೆ ಏರಿಕೆ ಮಾಡೋಕೆ ಹೊರಟಿದೆ. ಅದ್ದರಿಂದ ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದೆ. ಅದ್ದರಿಂದ ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದ ಕೆ.ಇ.ಆರ್.ಸಿ ಇದೀಗ ಮತ್ತೆ ವಿದ್ಯುತ್ ದರ ಏರಿಕೆ ಮಾಡಲು ಸಿದ್ದತೆ ನಡೆಸಿದೆ. ಜನವರಿ ತಿಂಗಳಿನಲ್ಲಿಯೇ ಪ್ರತಿ ಯೂನಿಟ್ ಗೆ ಇಂತಿಷ್ಟು ವಿದ್ಯುತ್ ದರ ಹೆಚ್ಚಳ ಮಾಡಿ ಎಂದು ಎಸ್ಕಾಂಗಳು ಪ್ರಸ್ತಾಪ ಇಡಲಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.


ಇದನ್ನೂ ಓದಿ: ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತಹಶೀಲ್ದಾರ್‌ ದಿಢೀರ್‌ ಭೇಟಿ


ಬೆಸ್ಕಾಂ ಸೇರಿ ಇತರೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ ಗೆ 49 ರಿಂದ 60 ಪೈಸೆಯವರಿಗೂ ವಿದ್ಯುತ್ ದರ ಏರಿಸುವಂತೆ ಬೇಡಿಕೆ ಇಟ್ಟಿವೆ. ಇನ್ನು ಈ ಬಾರಿ ಜನರಿಗೆ ಸಮಸ್ಯೆ ಆಗದಂತೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.