“ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ”

ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Written by - Zee Kannada News Desk | Last Updated : Oct 20, 2022, 12:07 AM IST
  • ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ.
  • ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ.
  • ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು.
“ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ” title=

ಬೆಂಗಳೂರು: ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.

ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ.

ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ

ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾಗಿದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ?

ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ.

ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ.

ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ' ರಸ್ತೆ ಗುಂಡಿಗಳ ಶೃಂಗ' (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ!

ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು.

ಇದನ್ನೂ ಓದಿ: "ಚುನಾವಣೆಯನ್ನು ಎದುರಿಟ್ಟುಕೊಂಡು ಸಂಪುಟ ವಿಸ್ತರಿಸಲಾಗಿದೆ ಹೊರತು, ಜನರ ಕಲ್ಯಾಣಕ್ಕಲ್ಲ"

ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು.

ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಅವರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News