ಮತೀಯ ದುಷ್ಕರ್ಮಿಗಳಿಂದ ಹತ್ಯೆಯಾದ ನಾಲ್ಕು ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

Written by - Manjunath N | Last Updated : Jun 17, 2023, 04:07 PM IST
ಮತೀಯ ದುಷ್ಕರ್ಮಿಗಳಿಂದ ಹತ್ಯೆಯಾದ ನಾಲ್ಕು ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಸುಳ್ಯ ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಪೊಲೀಸ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ..!

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News