ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.


COMMERCIAL BREAK
SCROLL TO CONTINUE READING

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶ ಬಂದಿರುವುದಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿದ್ದರು.


11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆದು, ಜುಲೈ 12ರಂದು ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿ ಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, July ನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ.ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು ಎಂದು ಸಿದ್ದರಾಮಯ್ಯ ತಿಳಿಸಿದರು.


ಇದನ್ನೂ ಓದಿ: ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ 11 ಆಯ್ಕೆ ಮಾಡಿದ ಯುವರಾಜ್ ಸಿಂಗ್: ಸ್ನೇಹಿತನಿಗೇ ಇಲ್ಲ ಸ್ಥಾನ!?


ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರು ಆಗಿದೆ.ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ ಎಂದರು.


ಇದನ್ನೂ ಓದಿ:  ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನಿಸಿದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಯಾರಿದು? ಈತನ ಹಿನ್ನೆಲೆ ಏನು?


ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ