ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ ‘ಕಲಿಕಾ ಚೇತರಿಕೆ’ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ (BC Nagesh) ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತಾಂತ್ರಿಕ ಸಲಹಾ ಸಮಿತಿ ಒಪ್ಪಿದರೆ ಶಾಲೆ ತೆರೆಯುವ ನಿರ್ಧಾರ: ಸಚಿವ ಬಿ.ಸಿ ನಾಗೇಶ್


ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಕಲಿಕಾ ಚೇತರಿಕೆ’ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಕರ ಸಂಘ ಹಾಗೂ ಶಿಕ್ಷಣ ಅಧಿಕಾರಿಗಳ ಸಂಘದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.


'ಕೋವಿಡ್-19 ಸೋಂಕಿನಿಂದ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು ನಷ್ಟವಾಗಿದೆ.ಶೈಕ್ಷಣಿಕ ಜೀವನದ ಎರಡು ಅಮೂಲ್ಯ ವರ್ಷಗಳನ್ನು ಮಕ್ಕಳು ಕಳೆದುಕೊಂಡಿದ್ದಾರೆ. ಕಳೆದುಕೊಂಡಿರುವುದನ್ನು ಸರಿದೂಗಿಸುವುದು ಅಷ್ಟು ಸುಲಭವಲ್ಲ. ಹಾಗೆಯೇ ಸರಿದೂಗಿಸುವುದು ಅಸಾಧ್ಯವೇನು ಅಲ್ಲ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜಿಸಿ ‘ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ರೂಪಿಸಿದೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ’ ವರ್ಷವೆಂದು ಘೋಷಿಸಲಾಗಿದೆ’ ಎಂದು ಸಚಿವ ನಾಗೇಶ್ ತಿಳಿಸಿದರು.


ಇದನ್ನೂ ಓದಿ: BC Nagesh : '15,000 ಶಾಲಾ ಶಿಕ್ಷಕರ ನೇಮಕಕ್ಕೆ ಮುಂದಾದ ಶಿಕ್ಷಣ ಇಲಾಖೆ'


ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಡೆಸಿದ ಸಮೀಕ್ಷೆಯಲ್ಲಿ ಮಕ್ಕಳ ಕಲಿಕೆಯಲ್ಲಿ ಹೆಚ್ಚು ಹಿನ್ನಡೆಯಾಗಿರುವುದು ಈಗಾಗಲೇ ಬಹಿರಂಗವಾಗಿದೆ. ಅಲ್ಲದೇ ಮಕ್ಕಳ ಪಾಲಕರು, ಶಿಕ್ಷಕರಿಗೂ ಅದರ ಬಗ್ಗೆ ತಿಳಿದಿದೆ. ಹೀಗಾಗಿ, ಕಲಿಕಾ ಹಿನ್ನಡೆ ಸರಿದೂಗಿಸುವ ಶಿಕ್ಷಣ ಇಲಾಖೆಯ ಈ ಪ್ರಯತ್ನದಲ್ಲಿ ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಶಿಕ್ಷಕರು ಈ ಶೈಕ್ಷಣಿಕ ವರ್ಷವನ್ನು ವಿಶೇಷ ಮತ್ತು ಅತ್ಯಂತ ಮುಖ್ಯವಾದ ವರ್ಷವೆಂದು ಪರಿಗಣಿಸಿ ವಿಶೇಷ ಆಸಕ್ತಿಯಿಂದ ಬೋಧನೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಚಿವರು ಕರೆ ನೀಡಿದರು.


ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ ಪ್ರಾರಂಭವಾಗುತ್ತಿದೆ. ವಿವಿಧ ಜಿಲ್ಲೆಗಳ ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರ ಅಭಿಪ್ರಾಯ ಕೇಳಿದಾಗ, 'ಈ ಬಾರಿಯ ಶೈಕ್ಷಣಿಕ ವರ್ಷವನ್ನು ಬೇಗ ಆರಂಭಿಸಿ, ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ನಾವೆಲ್ಲ ಸಿದ್ದರಾಗಿದ್ದೇವೆ ಎಂದು ಹೇಳಿದಾಗ ನನಗೆ ಅತ್ಯಂತ ಖುಷಿಯಾಗಿದೆ. ಮಕ್ಕಳ ಶಿಕ್ಷಣದ ಬಗ್ಗೆ ಶಿಕ್ಷಕರಿಗಿರುವ ಆಸಕ್ತಿ ಅಭಿನಂದನಾರ್ಹ’ ಎಂದರು.


ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ದೀಪಾ ಚೋಳನ್, ಡಿಎಸ್‌ಇಆರ್‌ಟಿ ನಿರ್ದೇಶಕರಾದ ಸುಮಂಗಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.