ಬೆಂಗಳೂರು: ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದಲ್ಲದೆ, ಹಲವು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ. ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3,000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ.


ಇದನ್ನೂ ಓದಿ: KSEAB Karnataka SSLC Results 2024 Live Updates: SSLC ಫಲಿತಾಂಶ ಪ್ರಕಟ  : ನಿಮ್ಮ ಅಂಕ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ 


ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಗಳನ್ನು ನಡೆಸಿದೆ. ನೀರಿನ ಸಮಸ್ಯೆಯಿರುವ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.


ಇದನ್ನೂ ಓದಿ: ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು


ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ.ಈ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ಅವರು ಹೇಳಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.