ಹರಿಹರ/ದಾವಣಗೆರೆ: ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ತುಟಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.


COMMERCIAL BREAK
SCROLL TO CONTINUE READING

ಹರಿಹರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಮಾಡುವ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಅವರು; ನಿಸ್ಸಂಶಯವಾಗಿ ಕೇಂದ್ರ ಬಜೆಟ್ ಮಂಡನೆ ಮೂಗಿಗೆ ತುಪ್ಪ ಸವರುವಂತಾಗಿದೆ ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಬಜೆಟ್ ಇದು ಎಂದರು.


ಇದನ್ನೂ ಓದಿ-Budget 2023: 1992 ರಲ್ಲಿ ಎಷ್ಟು ಆದಾಯ ತೆರಿಗೆ ಪಾವತಿಸಬೇಕಾಗುತ್ತಿತ್ತು? 30 ವರ್ಷಗಳ ಹಿಂದಿನ ಹಳೆ ಚಿತ್ರ ವೈರಲ್


ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿ ಆದಷ್ಟು ಶೀಘ್ರ ಕಾರ್ಯಗತ ಮಾಡಬೇಕು. ಆದರೆ, ಯಾವಾಗ ಮುಗಿಸುತ್ತಿರಿ ಎನ್ನುವ ಬಗ್ಗೆ ಡಬಲ್ ಎಂಜಿನ್ ಸರಕಾರಕ್ಕೆ ಖಾತರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.


ಅವರು ಈಗ ಯಾವುದೇ ಅಭಿವೃದ್ಧಿ ಘೋಷಣೆ ಮಾಡಿದರೂ ರಾಜ್ಯದಲ್ಲಿ ಚುನಾವಣೆ ಬಳಿಕವೇ ಜಾರಿಗೆ ಆಗುವುದು. ಈ ಬಜೆಟ್ ಪ್ರಸ್ತಾವನೆಗಳನ್ನು ಜಾರಿ ಮಾಡುವ ವಿಷಯದಲ್ಲಿ ಮುಂದೆ ರಾಜ್ಯದಲ್ಲಿ ರಚನೆ ಆಗುವ ಸರಕಾರ ಪ್ಪಾತ್ರವೂ ಮುಖ್ಯವಾಗಿರುತ್ತದೆ. ನರೇಂದ್ರ ಮೋದಿ ಅವರ ಸರಕಾರ ಬಂದು ಎಂಟು ವರ್ಷ ಆಗಿದೆ. ಈ ಎಂಟು ವರ್ಷದಲ್ಲಿ ಘೋಷಣೆಯಾಗದ ಕಾರ್ಯಕ್ರಮಗಳನ್ನು ಇಂದು ಘೋಷಣೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.


ಬಜೆಟ್ ಘೋಷಣೆಗಳು ಕಾಗದದ ಪತ್ರಗಳ ಘೋಷಣೆಗಳಗಿಯೇ ಉಳಿದಿವೆ. ಕಳೆದ 25 ವರ್ಷಗಳಿಂದ ರೈಲ್ವೇ ಯೋಜನೆಗಳು ಇನ್ನೂ ನೆನೆಗುದಿಗೆ ಬಿದ್ದಿವೆ. ಎಷ್ಟು ಸಲ ಕೇಂದ್ರದ ಬಳಿ ಅರ್ಜಿ ಹಿಡಿದುಕೊಂಡು ಹೋಗುವುದು? ಡಬಲ್ ಎಂಜಿನ್ ಸರಕಾರ ಬಂದರೆ ಎಲ್ಲಾ ಮಾಡುತ್ತೇವೆ ಎಂದರು. ಮೂರು ವರ್ಷ ಆಯಿತು. ಇವರು ಏನೂ ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.


ಇದನ್ನೂ ಓದಿ-Budget 2023: ಮಾರುಕಟ್ಟೆಗೆ ಹಿಡಿಸದ ನಿರ್ಮಲಾ ಬಜೆಟ್, 1200 ಅಂಕಗಳಿಂದ ಗೋತಾ ಹೊಡೆದ ಸೆನ್ಸೆಕ್ಸ್


ಬಿಜೆಪಿ ನಾಯಕರು ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೋಗಿ ಸಾವಿರಾರು ಕೋಟಿ ಘೋಷಣೆ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಕೈತೊಳೆದುಕೊಂಡು ಅತ್ತ ತಲೆ ಹಾಕುವುದಿಲ್ಲ. ಬಿಜೆಪಿ ಕಾರ್ಯಕ್ರಮಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ತಿರಸ್ಕರಿಸಲು ಜನರು ಸಿದ್ಧರಾಗಿದ್ದಾರೆ ಎಂದು ಅವರು ಟೀಕಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.