Helpdesk: ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಸ್ಥಾಪಿಸಿದ ರಾಜ್ಯ ಸರ್ಕಾರ

ವಿವಿಧ ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಲ್ಲಿ ಸಿಲುಕಿರುವ ಕರ್ನಾಟಕದ ಜನತೆಗೆ ನೆರವಾಗಲು ರಾಜ್ಯ ಸರ್ಕಾರ ಮಂಗಳವಾರ ಸಹಾಯ ಕೇಂದ್ರವನ್ನು ಸ್ಥಾಪಿಸಿದೆ.  

Written by - Yashaswini V | Last Updated : Oct 20, 2021, 11:01 AM IST
  • ವಿವಿಧ ಸ್ಥಳಗಳಲ್ಲಿ ಸಿಲುಕಿರುವ ರಾಜ್ಯದ ಜನರಿಗೆ ನೆರವಾಗುವ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ
  • ನೈಸರ್ಗಿಕ ವಿಪತ್ತಿನಿಂದಾಗಿ ಇತರ ರಾಜ್ಯಗಳಲ್ಲಿ ಸಿಲುಕಿರುವ ಜನರು ಅಥವಾ ಸಿಕ್ಕಿಬಿದ್ದವರ ಸಂಬಂಧಿಗಳು ಈ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು
  • ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆಗಳು 24/7 ಕಾರ್ಯನಿರ್ವಹಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
Helpdesk: ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಸ್ಥಾಪಿಸಿದ ರಾಜ್ಯ ಸರ್ಕಾರ title=
ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಸ್ಥಾಪಿಸಿದ ರಾಜ್ಯ ಸರ್ಕಾರ (Image courtesy: ANI)

ಬೆಂಗಳೂರು: ಪ್ರವಾಹ ಪೀಡಿತ ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ರಾಜ್ಯದ ಜನರಿಗೆ ನೆರವಾಗುವ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ನೈಸರ್ಗಿಕ ವಿಪತ್ತಿನಿಂದಾಗಿ ಇತರ ರಾಜ್ಯಗಳಲ್ಲಿ ಸಿಲುಕಿರುವ ಜನರು ಅಥವಾ ಸಿಕ್ಕಿಬಿದ್ದವರ ಸಂಬಂಧಿಗಳು ಈ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು ಮತ್ತು ತಕ್ಷಣದ ಕ್ರಮ ಮತ್ತು ತ್ವರಿತ ಪ್ರತಿಕ್ರಿಯೆಗಾಗಿ ಉತ್ತರಾಖಂಡದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಆಶೋಕ್,  ವಿವಿಧ ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಲ್ಲಿ (Flood) ಸಿಲುಕಿರುವ ರಾಜ್ಯದ ಜನರು, ಅವರ ಸಂಬಂಧಿಕರು, ಸ್ನೇಹಿತರು ಈ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ- Heavy Rain in Uttarakhand: ಭಾರೀ ಮಳೆಗೆ ತತ್ತರಿಸಿದ ಉತ್ತರಾಖಂಡ; 40 ಜನರ ಮೃತ್ಯು

ವಾಸ್ತವವಾಗಿ, ದೇಶದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ, ವಿವಿಧ ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಲ್ಲಿ (Heavy Rain and Flood) ಸಿಲುಕಿರುವ ಪ್ರಯಾಣಿಕರು, ಯಾತ್ರಾರ್ಥಿಗಳು, ಪ್ರವಾಸಿಗರು ಮತ್ತು ರಾಜ್ಯದ ಸಂದರ್ಶಕರಂತಹ ಜನರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರ ಮಂಗಳವಾರ ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. 

ಇದನ್ನೂ ಓದಿ- Goa: ಗೋವಾ ಶ್ರೀಮಂತ ಪ್ರವಾಸಿಗರನ್ನು ಬಯಸುತ್ತದೆ, ಬಸ್‌ಗಳಲ್ಲಿ ಅಡುಗೆ ಮಾಡುವವರನ್ನಲ್ಲ- ಪ್ರವಾಸೋದ್ಯಮ ಸಚಿವ

ಕರ್ನಾಟಕ ರಾಜ್ಯ (Karnataka State) ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆಗಳು: 080 - 1070 (ಟೋಲ್ ಫ್ರೀ) ಮತ್ತು 080 - 2234 0676. ಯಾವುದೇ ರೀತಿಯ ವಿಪತ್ತಿನ ಸಮಯದಲ್ಲಿ ಸಹಾಯ ಪಡೆಯಲು ಈ ಸಂಖ್ಯೆಗಳಿಗೆ ಕರೆ ಮಾಡಬಹುದು. ಈ ಸಂಖ್ಯೆಗಳು 24/7 ಕಾರ್ಯನಿರ್ವಹಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News