ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೆರಿಸಿದ ರಾಜ್ಯ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪಂಚಾಯತ್ ರಾಜ್ ಆಯುಕ್ತಾಲಯದ ವತಿಯಿಂದ ಆಯೋಜಿಸಿದ್ದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಪ್ರಗತಿ ಪರಿಶೀಲನೆ, ಅರಿವು ಕೇಂದ್ರಗಳ ಲೋಗೋ, ಪೋಸ್ಟರ್, ಕಟ್ಟಡ ವಿನ್ಯಾಸ, ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಅರಿವು ಕೇಂದ್ರಗಳ ಚಟುವಟಿಕೆಗಳ ಸಂಪುಟವನ್ನು ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು.
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪಂಚಾಯತ್ ರಾಜ್ ಆಯುಕ್ತಾಲಯದ ವತಿಯಿಂದ ಆಯೋಜಿಸಿದ್ದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಪ್ರಗತಿ ಪರಿಶೀಲನೆ, ಅರಿವು ಕೇಂದ್ರಗಳ ಲೋಗೋ, ಪೋಸ್ಟರ್, ಕಟ್ಟಡ ವಿನ್ಯಾಸ, ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಅರಿವು ಕೇಂದ್ರಗಳ ಚಟುವಟಿಕೆಗಳ ಸಂಪುಟವನ್ನು ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು.
ಮನುಷ್ಯ ಪ್ರಗತಿ ಹೊಂದಲು ಅವನಲ್ಲಿ ಕುತೂಹಲ ಇರಬೇಕು, ಅಧ್ಯಯನದಿಂದ ಕುತೂಹಲಗಳಿಗೆ ಉತ್ತರ ದೊರಕುವುದರಿಂದ ಗ್ರಾಮೀಣ ಗ್ರಂಥಾಲಯಗಳನ್ನು ʼಅರಿವು ಕೇಂದ್ರʼಗಳೆಂದು ಹೆಸರಿಸಲಾಗಿದೆ, ಹಾಗೂ ಡಾಟಾಬೇಸ್ ಮೂಲಕ ರಾಜ್ಯದ 6000 ಗ್ರಂಥಾಲಯಗಳ ಮಾಹಿತಿ ಸಂಗ್ರಹಿಸಲಾಗಿದೆ.
ಇಲ್ಲಿಯವರೆಗೆ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಅಗಾಧವಾದ ಸಾಧನೆ ಹೊಂದಿದ್ದು, 5,895 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ 4925 ಗ್ರಂಥಾಲಯಗಳಿಗೆ ಕಟ್ಟಡ, ಕಟ್ಟಡದ ನವೀಕರಣ, ಕೊಠಡಿಗಳು, ಓದುವ ಸಾಮಗ್ರಿಗಳನ್ನು ಇಡಲು ಕಪಾಟುಗಳು, ಅಗತ್ಯ ಪೀಠೋಪಕರಣಗಳು, ಪುಸ್ತಕ, ನಿಯತಕಾಲಿಕಗಳ ಸಂಗ್ರಹಣೆ ಇತ್ಯಾದಿಗಳನ್ನು ಒದಗಿಸಿ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿಯವರೆಗೆ 5537 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ ಈ ಗ್ರಂಥಾಲಯಗಳನ್ನು ಗ್ರಾಮೀಣ ಭಾಗಗಳಲ್ಲಿ ಪೋಷಿಸಿ ಮಕ್ಕಳಿಗೆ ಅರಿವಿನ ಸಂಗಾತಿಯಾಗಿಸಬೇಕೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಂಥಪಾಲಕರಿಗೆ ಕರೆ ನೀಡಿದೆ.
ಇದನ್ನೂ ಓದಿ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ’ಗೆ ಚಾಲನೆ
ಮಕ್ಕಳು ಓದುವ ಅಭ್ಯಾಸದಿಂದ ದೂರ ಉಳಿಯಬಾರದು ಎಂಬ ಉದ್ದೇಶದೊಂದಿಗೆ "ಓದುವ ಬೆಳಕು" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಜೀಂ ಪ್ರೇಮ್ ಜೀ ಫೌಂಡೇಶನ್, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಗಳು ನೆರವು ನೀಡಿವೆ. 6 ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಅವರು ಮನೆಗೆ ಪುಸ್ತಕ ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಹಾಗೂ ಓದುವ ಹವ್ಯಾಸವನ್ನು ಪ್ರೋತ್ಸಾಹಿಸಿದ್ದರ ಪರಿಣಾಮವಾಗಿ ಇಂದು ಗ್ರಂಥಾಲಯಗಳಲ್ಲಿ ಒಟ್ಟು 47,83,858 ಮಕ್ಕಳು ನೋಂದಣಿಯಾಗಿದ್ದಾರೆ ಎಂದು ವಿವರಿಸಿದರು.
ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ, ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ ಅಭಿಯಾನ, ಗಟ್ಟಿ ಓದು ಅಭಿಯಾನ, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ನಿಮ್ಮ ಗೆಳೆಯರನ್ನು ಗ್ರಂಥಾಲಯಕ್ಕೆ ಕರೆತನ್ನಿ, ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನಾನು ಓದುವ ಪುಸ್ತಕಗಳು, ನನ್ನ ಪ್ರೀತಿಯ ಗ್ರಂಥಾಲಯ, ವಾರ್ತಾ ಪತ್ರಿಕೆ ಓದೋಣ ಮುಂತಾದ ಮಕ್ಕಳ ಸ್ನೇಹಿ ಅಭಿಯಾನಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ "ಅರಿವು ಕೇಂದ್ರ”ಗಳಾಗಿ ಕಾರ್ಯ ನಿರ್ವಹಿಸಲು ಪೂರಕವಾಗಿ ಕೆಲಸದ ಸಮಯವನ್ನು 6 ರಿಂದ 8 ಗಂಟೆಗಳಿಗೆ ಏರಿಸಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ: ಸಾಫ್ಟ್'ವೇರ್ ಉನ್ನತೀಕರಣದ ಸಲುವಾಗಿ 10 ದಿನಗಳ ಕಾಲ ಆನ್‌ಲೈನ್ ಸೇವೆಗಳ ಅಲಭ್ಯತೆ!
ವಿಶ್ವಗುರು ಬಸವಣ್ಣನವರ ಆಶಯದಂತೆ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಭಾಗದ ಮಕ್ಕಳಲ್ಲಿ ಜ್ಞಾನದ ಸಾಕ್ಷತ್ಕಾರ ಮೂಡಿಸಿ ಸಮಾಜವನ್ನು ಅರಿವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ನಮ್ಮ ಗ್ರಾಮೀಣಾಭಿವೃದ್ಧಿ ಇಲಾಖೆಯು ಕಾರ್ಯೋನ್ಮುಖವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.