ರಾಜ್ಯದ 27 ಮಾಜಿ ಸಚಿವರ ಸರ್ಕಾರಿ ಭದ್ರತೆ ವಾಪಸ್

ಕೇಂದ್ರದ ಮಾದರಿಯನ್ನೇ ಅನುಸರಿಸಿದ ರಾಜ್ಯ ಸರ್ಕಾರ.

Written by - Yashaswini V | Last Updated : Jan 30, 2020, 01:12 PM IST
ರಾಜ್ಯದ 27 ಮಾಜಿ ಸಚಿವರ ಸರ್ಕಾರಿ ಭದ್ರತೆ ವಾಪಸ್ title=

ಬೆಂಗಳೂರು: ಕೇಂದ್ರ ಸರ್ಕಾರ ಮಾಜಿ ಪ್ರಧಾನಮಂತ್ರಿಗಳು ಸೇರಿದಂತೆ ಅನೇಕರಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದಿತ್ತು. ಇದೀಗ ಕೇಂದ್ರ ಸರ್ಕಾರದ ಮಾದರಿಯನ್ನೇ ಅನುಸರಿಸಿರುವ ರಾಜ್ಯ ಸರ್ಕಾರ 27 ಮಾಜಿ ಸಚಿವರಿಗೆ ನೀಡಲಾಗಿದ್ದ ಸರ್ಕಾರಿ ಭದ್ರತೆಯನ್ನು ಹಿಂಪಡೆದಿದೆ.

ಈ ಹಿಂದೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ, ಆರ್.ವಿ. ದೇಶಪಾಂಡೆ ಮತ್ತು ಜಿ.ಟಿ. ದೇವೇಗೌಡ ಸೇರಿದಂತೆ ಒಟ್ಟು 27 ಮಾಜಿ ಸಚಿವರಿಗೆ ರಾಜ್ಯ ಸರ್ಕಾರ ಒದಗಿಸುತ್ತಿದ್ದ ಅಂಗರಕ್ಷಕ ಮತ್ತು ಭದ್ರತೆಯನ್ನು ಸರ್ಕಾರ ವಾಪಸ್ ಪಡೆದಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿರುವ ಸೂಚನೆ ಮೇರೆಗೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಜನವರಿ 22, 2020ರಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 22 ರಿಂದ ರಾಜ್ಯದ 27 ಮಾಜಿ ಸಚಿವರಿಗೆ ಒದಗಿಸಲಾಗಿದ್ದ ಸರ್ಕಾರಿ ಭದ್ರತೆಯನ್ನು ಹಿಂಪಡೆಯಲಾಗಿದೆ.

ಇದೇ ಸಂದರ್ಭದಲ್ಲಿ 'ಎ' ಶ್ರೇಣಿಯಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಹೆಚ್.ಡಿ. ರೇವಣ್ಣ ಸೇರಿದಂತೆ ಮತ್ತಿತರರ ಭದ್ರತೆಯನ್ನು ಯಥಾಸ್ಥಿತಿ ಮುಂದುವರೆಸಲಾಗಿದೆ.

Trending News