ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ: ಸಿಎಂ ಬೊಮ್ಮಾಯಿ
ಸಮಗ್ರ ಅಭಿವೃದ್ಧಿಯ ಬಗ್ಗೆ ನಮಗೆ ಸ್ಷಷ್ಟಯೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಯಾದಗಿರಿ: ಸಮಗ್ರ ಅಭಿವೃದ್ಧಿಯ ಬಗ್ಗೆ ನಮಗೆ ಸ್ಷಷ್ಟಯೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮಸರ್ಕಾರ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತ ಕೂಲಿಕಾರರು, ನೇಕಾರರು, ಮೀನುಗಾರರಿಗೆ ವಿಸ್ತರಿಸಲಾಗಿದೆ. ಎಸ್ ಸಿ/ಎಸ್/ಟಿ ಜನಾಂಗಕ್ಕೆ 75 ಯೂನಿಟ್ ವರೆಗೂ ಉಚಿತ ವಿದ್ಯುತ್, ಅವರ ಮನೆಗೆ 2 ಲಕ್ಷ ರೂ.ಗಳು, ಜಮೀನಿಗೆ 20 ಲಕ್ಷ ರೂ.ಗಳು ಒದಗಿಸಲಾಗುತ್ತಿದೆ. 100 ಡಾ; ಅಂಬೇಡ್ಕರ್ ಹಾಸ್ಟಲ್, 50 ಕನಕದಾಸರ ಹಾಸ್ಟೆಲ್ , ಒಂದು ಸಾವಿರ ಮಕ್ಕಳಿಗೆ 5 ಮೆಗಾ ಹಾಸ್ಟೆಲ್ ಗಳನ್ನು ಕಲಬುಗಿಯಲ್ಲಿ ನಿರ್ಮಿಸಲಾಗುತ್ತಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ, ರಾಯಚೂರು ಮತ್ತು ಕಲಬುರಗಿಯಲ್ಲಿ ಜವಳಿ ಪಾರ್ಕ್ , ಯಾದಗಿರಿಯಲ್ಲಿ ಫಾರ್ಮಸ್ಯುಟಿಕಲ್ ಪಾರ್ಕ್ ನಿರ್ಮಿಸಲಾಗುತ್ತಿದೆ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರು ನಡೆಸಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಸಾಮಾಜಿಕ ನ್ಯಾಯ ನೀಡುವುದು ನಮ್ಮ ಧ್ಯೇಯ, ಬದ್ಧತೆ ಹಾಗೂ ಇಚ್ಛಾಶಕ್ತಿ. ಕಾನೂನಾತ್ಮಕವಾಗಿ ಇನ್ನಷ್ಟು ಗಟ್ಟಿಗೊಳಿಸುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಒಮ್ಮೆ ಅವಕಾಶ ಕೊಟ್ಟರೆ ಕನ್ನಡ ನಾಡು, ಭಾರತದೇಶವನ್ನು ದುರ್ಬಲ ವರ್ಗದವರು ಕಟ್ಟುತ್ತಾರೆ. ಈ ದೇಶವನ್ನು ಕೇವಲ ಶ್ರೀಮಂತರು ಕಟ್ಟಲಾಗುವುದಿಲ್ಲ. ಕೂಲಿಕಾರರು ರಸ್ತೆ ನಿರ್ಮಿಸುವುದರಿಂದ ಬದಲಾವಣೆ ಸಾಧ್ಯವಾಗುತ್ತದೆ ಎಂದರು.
ಸರ್ಕಾರದ ಸಂಕಲ್ಪ
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶಾಸಕ ರಾಜೂಗೌಡ ಶ್ರಮಿಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಸಂಕಲ್ಪವೂ ಹೌದು. ಹೈದರಾಬಾದ್ ಕರ್ನಾಟಕ ಹಿಂದುಳಿದಿದ್ದು, ಈ ಭಾಗವನ್ನು ಮುಂದೆ ತರಲು ರೈತರಿಗಾಗಿ ನೀರಾವರಿ, ಉದ್ಯೋಗಕ್ಕಾಗಿ ಕೈಗಾರಿಕೆ, ಶಿಕ್ಷಣಕ್ಕಾಗಿ ಶಾಲೆಗಳು, ಆರೋಗ್ಯಕ್ಕಾಗಿ ಆಸ್ಪತ್ರೆಗಳು,ಸಂಪರ್ಕಕ್ಕಾಗಿ ರಸ್ತೆ, ವಿಶ್ವವಿದ್ಯಾಲಯ, ವಿಮಾನನಿಲ್ದಾಣ ಗಳನ್ನು ಈ ಭಾಗದ ಅಭಿವೃದ್ಧಿಗಾಗಿ ಒದಗಿಸಲಾಗುತ್ತಿದೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.