ಹುಬ್ಬಳ್ಳಿ: ಜಾತಿ‌ ಜನಗಣತಿ ಗೊಂದಲ ವಿಚಾರ, ಕಾಂಗ್ರೆಸ್ ಸರ್ಕಾರದಲ್ಲೇ ಗೊಂದಲವಿದೆ. ಜಾತಿ ಜನಗಣತಿ ವಿಚಾರದಲ್ಲೂ ದೊಡ್ಡ ಪ್ರಮಾಣದ ಗೊಂದಲ‌ಸೃಷ್ಠಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತ ಿಜನಗಣತಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಕೆಲಸವನ್ನ ನಾವು ಮಾಡುತ್ತೇವೆ ಅಂತಾ ರಾಜ್ಯ ಸರ್ಕಾರ ಹೇಳುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.


COMMERCIAL BREAK
SCROLL TO CONTINUE READING

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಾತಿ ಜನಗಣತಿ ವರದಿಯ ಪತ್ರ ಮಾಯವಾಗಿದೆ ಅಂತಾ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲೇ ಸಹಮತವಿಲ್ಲ. ಡಿ.ಕೆ.ಶಿವಕುಮಾರ , ಶಾಮನೂರು ಶಿವಶಂಕರಪ್ಪ ಮೊದಲಾದವರಿಂದ ಇದರ ಬಗ್ಗೆ ವಿರೋಧವಿದೆ. ಈ ಕುರಿತು ವರದಿ ಜಾರಿಯಾಗಬಾರದೆಂದು ವಿರೋಧ ಅವರಲ್ಲೇ ಇದೆ ಎಂದರು. 


ಇದನ್ನೂ ಓದಿ- ಕಾಫಿನಾಡು ಮೂಡಿಗೆರೆಯಲ್ಲಿ ಕಾಡಾನೆ ದಾಳಿ: ಓರ್ವ ಸಾವು


ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ ? ಕೆಲ‌ ಶಾಸಕರನ್ನ ಎತ್ತಿಕಟ್ಟಿ ಸಿಎಂ ಸಿದ್ಧರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಠಿಯಿಂದ ಸರ್ಕಾರ ಸರಿಯಾಗಿ‌ ನಡೆಸಬೇಕು. ಆದ್ರೆ ಸಿದ್ಧರಾಮಯ್ಯ 20 ಶಾಸಕರನ್ನ ಮೈಸೂರಿಗೆ ಕಳಿಸುವ ಪ್ರಯತ್ನ ಮಾಡಿದ್ರು. ಸದ್ಯ ಹಲವು ಶಾಸಕರು ವಿದೇಶ ಪ್ರವಾಸದಲ್ಲಿದ್ದಾರೆ. ಈ ರೀತಿ ಗೊಂದಲ ಸೃಷ್ಠಿಸಿದ್ದಾರೆ ಇದು ಸರಿಯಲ್ಲ‌. ಜಾತಿ ಜನಗಣತಿ ವಿಚಾರದಲ್ಲೂ ಇದೇ ರೀತಿ ಗೊಂದಲಗಳಿವೆ ಎಂದು ಕೇಂದ್ರ ಸಚಿವರು ಹೇಳಿದರು. 


ಜನ ಐದು ವರ್ಷ ಅಧಿಕಾರ ನೀಡಿದ್ದು ಗೊಂದಲಗಳಿಲ್ಲದೇ ಕೆಲಸ ಮಾಡಲು. ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮಗಳು ನಿಂತು ಹೋಗಿವೆ. ಬಹಳಷ್ಟು ಭಾಗದಲ್ಲಿ ಸಚಿವರು ತಮ್ಮ ಕ್ಷೇತ್ರಗಳಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿತ ಕಂಡಿದೆ. ಸರ್ಕಾರ ಈ‌ ನ್ಯೂನತೆಗಳನ್ನ ಸರಿಪಡಿಸಬೇಕು ಎಂದವರು ಆಗ್ರಹಿಸಿದರು.


ಇದನ್ನೂ ಓದಿ- ಕರ್ನಾಟಕದಲ್ಲಿ ಸುತ್ತಾಡುವುದು ನನಗೆ ತುಂಬಾ ಇಷ್ಟ: ಖ್ಯಾತ ಕ್ರಿಕೆಟಿಗ ಜಾಂಟಿರೋಡ್ಸ್


ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನ ಅಪಶಕುನಿ ಎಂಬ ರಾಹುಲ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದಿರೋದೇ ಉತ್ತಮ. ಅವರು ಯಾವ ಕೀಳು ಮಟ್ಟಕ್ಕೆ ಇಳಿಯುತ್ತಾರೆ ಅನ್ನೋದಕ್ಕೆ ಈ‌ ಹೇಳಿಕೆಯೇ ಸಾಕ್ಷಿ. ರಾಹುಲ್ ಗಾಂಧಿಗೆ ಹೊಸ ವಿಷಯ ಬರೆದು ಕೊಡೋವರೆಗೂ ಅವರು ಏನೇನೋ ಮಾತನಾಡುತ್ತಾರೆ. ದೇಶದಲ್ಲಷ್ಟೇ ಅಲ್ದೇ ಇಡೀ ವಿಶ್ವದಲ್ಲಿ‌ ಮೋದಿ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು ಅವರ ಮೇಲೆ ಜನರ ಆಶೀರ್ವಾದ ಹೆಚ್ಚಿಗೆಯಾಗುತ್ತೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.