ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರ ಹಾಗೂ ರೈತರ ಹಿತ ಕಾಪಾಡಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಹೊಸಪೀಠ ರಚನೆ ಮಾಡಿದೆ. ರಾಜ್ಯ ಸರ್ಕಾರ ಇದನ್ನು ಗಂಭಿರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಟೀಕಿಸಿದರು.
ಇದನ್ನೂ ಓದಿ: ಬಸ್‌ನಲ್ಲಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಇಬ್ಬರು ಐನಾತಿಗಳ ಬಂಧನ..!́
ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂಕೋರ್ಟ್‍ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು. ನಾವು ವಿರೋಧ ಪಕ್ಷವಾಗಿ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧರಿದ್ದೇವೆ. ಮಂಡ್ಯ-ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಬಿಜೆಪಿ-ಜೆಡಿಎಸ್‍ನವರಿಗೆ ಉತ್ತರ ಕೊಡಬೇಕಿಲ್ಲವೆಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಶಿವಕುಮಾರ್ ಅವರು ನೀರಾವರಿ ಸಚಿವರು. ಅವರು ರಾಜ್ಯದ ಜನತೆಗೆ, ರೈತರಿಗೆ, ಬೆಂಗಳೂರಿನ ಜನತೆಗೆ ಉತ್ತರ ಕೊಡಲಿ. ನಾವು ವಿರೋಧ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ರೈತರನ್ನು ಕೋರ್ಟ್‍ಗೆ ಹೋಗಿ ಎಂದರೆ ಹೇಗೆ? ಅವರು ರಾಜ್ಯದ ಜನರ ಹಿತ ಕಾಯಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ: ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಕಾವೇರಿ’ ಅಸ್ತ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.