ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡನೀಯ: ಬಿ.ವೈ.ವಿಜಯೇಂದ್ರ

B. Y. Vijayendra: ”ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಆಧರಿಸಿ 15 ಲಕ್ಷ ರೂ. ಪರಿಹಾರ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.. 

Written by - Savita M B | Last Updated : Feb 20, 2024, 10:16 AM IST
  • ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿ
  • ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ
  • ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹ
ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡನೀಯ: ಬಿ.ವೈ.ವಿಜಯೇಂದ್ರ   title=

ಬೆಂಗಳೂರು: ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತಮ್ಮ ‘X’ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನು ಓದಿ : ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಣೆ

ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ  ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಇದನ್ನು ಓದಿ : GK Quiz: ಯಾವ ಆಂಜನೇಯನ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಸಲ್ಲಿಸುತ್ತಾರೆ?

ರಾಜ್ಯ ಸರ್ಕಾರ ಪರಿಹಾರ ನೀಡಿದ್ದು ಎಷ್ಟು ಸರಿ? 
ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೆ ಅರಣ್ಯ ಸಚಿವರು, ನಿಮ್ಮ (ರಾಹುಲ್ ಗಾಂಧಿ) ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಜೊತೆಗೆ ಈ ಬಗ್ಗೆ ಬೀದರ್‌ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೋ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದ್ದು ಈ ಹಿನ್ನಲೆಯಲ್ಲಿ ವಿಜಯೇಂದ್ರ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಈ ಕುರಿತು ತಮ್ಮ ಅಧಿಕೃತ 'X' ಖಾತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆ: 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News