ಶಿವಮೊಗ್ಗ, ಮೇ 31, ಶುಕ್ರವಾರ : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. 


COMMERCIAL BREAK
SCROLL TO CONTINUE READING

ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು ಆರ್‌.ಅಶೋಕ ಭೇಟಿಯಾಗಿ ಸಾಂತ್ವನ ಹೇಳಿದ ಅವರು, ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು.


 ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಇಲ್ಲಿಗೆ ಬಂದ ಸಚಿವರು ಯಾವುದೇ ವ್ಯವಸ್ಥೆ ಮಾಡಿಲ್ಲ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇದು ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಸಚಿವರು ಹಾಗೂ ಮುಖ್ಯಮಂತ್ರಿಯ ಬೆಂಬಲವಿಲ್ಲದೆ ಇಂತಹ ಅವ್ಯವಹಾರ ನಡೆಯಲು ಸಾಧ್ಯವಿಲ್ಲ ಎಂದರು. 


ಇದನ್ನೂ ಓದಿ: Photos: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ


ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು. 


ಗೃಹ ಸಚಿವರಿಗೆ ಹಿಡಿತವಿಲ್ಲ


ಡಾ.ಜಿ.ಪರಮೇಶ್ವರ್‌ ಅವರಿಗೆ ಇಲಾಖೆಯಲ್ಲಿ ಆಸಕ್ತಿಯೂ ಇಲ್ಲ, ಹಿಡಿತವೂ ಇಲ್ಲ. ಗೃಹ ಇಲಾಖೆಯನ್ನು ಸಿಎಂ, ಡಿಸಿಎಂ ಮತ್ತು ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಣೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಉಳಿಯಬೇಕೆಂದರೆ ಅವರಾಗಿಯೇ ಸಿಬಿಐ ತನಿಖೆಗೆ ವಹಿಸುವುದು ಉತ್ತಮ. ಕಾಂಗ್ರೆಸ್‌ನ ಕೆ.ಜೆ.ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್‌ ಚಿಟ್‌ ನೀಡಿತ್ತು. ತಪ್ಪಿತಸ್ಥರಲ್ಲವೆಂದರೆ ಕ್ಲೀನ್‌ ಚಿಟ್‌ ಸಿಗುತ್ತದೆ. ಇದು ಬಡವರ ಹಣವಾಗಿದ್ದು, ವಾಲ್ಮೀಕಿ ಸಮುದಾಯವರಿಗೆ ಸಾಲ ನೀಡಲು ಈ ಹಣ ಬಳಕೆಯಾಗುತ್ತಿತ್ತು. ಈಗ ಸರ್ಕಾರ ಎಲ್ಲ ಬಗೆಯ ಸಾಲಗಳನ್ನು ಸ್ಥಗಿತಗೊಳಿಸಿದೆ ಎಂಬ ಸುದ್ದಿ ಬಂದಿದೆ. ಪರಿಶಿಷ್ಟ ಪಂಗಡದವರಿಗೆ ಈಗ ಸಾಲವೇ ಇಲ್ಲದೆ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು. 


ಇದನ್ನೂ ಓದಿ: ಪ್ರಧಾನಿ ಮೋದಿ ಧ್ಯಾನ ಮಾಡಲು ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕವನ್ನು ಆರಿಸಿಕೊಂಡಿದ್ದೇಕೆ?


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಪಂಗಡದ ಜನರ ಬಗ್ಗೆ ಗೌರವವೇ ಇಲ್ಲ. ಗೌರವ ಇದ್ದರೆ ಸರಿಯಾದ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.


ಮತ್ತೊಂದು ಆತ್ಮಹತ್ಯೆ


ಕೆಆರ್‌ಐಡಿಎಲ್‌ ಗುತ್ತಿಗೆದಾರ ಪಿ.ಸಿ.ಗೌಡರ್‌ ಅವರ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಈಗ ಉತ್ತರ ಹೇಳಬೇಕು. ಕೂಡಲೇ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆಗೆ ಎಸ್‌ಐಟಿ ರಚಿಸಬೇಕು. ಗುತ್ತಿಗೆದಾರರ ಬಾಕಿ ಪಾವತಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.


ಕೆ.ಎಸ್‌.ಈಶ್ವರಪ್ಪನವರ ಪ್ರಕರಣದಲ್ಲಿ ರಸ್ತೆ ರಸ್ತೆಯಲ್ಲಿ ಕಾಂಗ್ರೆಸ್ಸಿಗರು ಬಾಯಿ ಬಡಿದುಕೊಂಡಿದ್ದರು. ಈಗ ಕಮಿಶನ್‌ಗಾಗಿ ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುತ್ತಿಲ್ಲ. ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಬಿಡುವುದಿಲ್ಲ. ಕುಟುಂಬದವರಿಗೆ ನ್ಯಾಯ ಕೊಡಿಸಲು ಎಲ್ಲ ಬಗೆಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.