ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಡಾ. ಜಿ ಪರಮೇಶ್ವರ

ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

Written by - Bhavishya Shetty | Last Updated : Apr 9, 2025, 08:57 PM IST
    • ಮಂಡ್ಯ ಜಿಲ್ಲಾ‌ ಕಾಂಗ್ರೆಸ್ ಕಚೇರಿಗೆ ಭೇಟಿ
    • ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ
    • ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಆಗುವುದಿಲ್ಲ
ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಡಾ. ಜಿ ಪರಮೇಶ್ವರ
File Photo

ಮಂಡ್ಯ:- ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

Add Zee News as a Preferred Source

ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇದನ್ನೂ ಓದಿ:  10 ಕ್ಕೂ ಹೆಚ್ಚು ಜನರೊಂದಿಗೆ ಅಫೇರ್‌ "ನಾನು ಅದೊಂದಕ್ಕಾಗಿಯೇ ಅಷ್ಟು ಜನರ ಜೊತೆ..." ಖ್ಯಾತ ನಟಿಯ ಶಾಕಿಂಗ್‌ ಕಾಮೆಂಟ್ಸ್‌ ವೈರಲ್‌!

ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂಬುದು ಬಿಜೆಪಿಯವರಿಗೆ ಈಗ ಅರ್ಥವಾಗಿದೆ.  ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಷ್ಟ್ರದ ಗಮನ ಸೆಳೆದಿದ್ದೇವೆ. ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ತೆರಿಗೆ ಕಟ್ಟುವುದರಿಂದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ‌‌ ಎಂದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗುತ್ತಾರೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದರು. ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದ್ದೇವೆ. ಜಾತಿ, ಧರ್ಮ, ಪಕ್ಷ ಬೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೆಣ್ಣು ಮಕ್ಕಳು ಆರ್ಥಿಕಶಕ್ತಿ ಪಡೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಯೋಜನೆಗಳನ್ನು ನೀಡಿದ್ದೇವೆ‌. 10 ಕೆಜಿ ಉಚಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡಲಿಲ್ಲ. ಐದು ಕೆಜಿ ಬದಲಿಗೆ ಹಣ ನೀಡಿದ್ದೇವೆ‌ ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಉದ್ದೇಶದಿಂದ ಎರಡು ಸಾವಿರ ರೂ., 200 ಯುನಿಟ್ ಉಚಿತ ವಿದ್ಯುತ್, 10 ಕೆಜಿ ಉಚಿತ ಅಕ್ಕಿ ಸಿಗುತ್ತಿದೆ. ಇಷ್ಟೆಲ್ಲ ಸವಲತ್ತುಗಳನ್ನು ನೀಡಿದರು ಜನ ಆಕ್ರೋಶಗೊಳ್ಳುತ್ತಾರೆಯೇ? ಯಾವುದಾದರು ಅಭಿವೃದ್ಧಿ ಕಾರ್ಯಗಳು ನಿಂತಿವೆಯೇ? ಇದು ಬಿಜೆಪಿಯವರ ಆಕ್ರೋಶ. ಬಿಜೆಪಿಯವರ ನಡುವಳಿಕೆಯ ಬಗ್ಗೆ ರಾಜ್ಯದ ಜನ ಪ್ರತಿಕ್ರಿಯಿಸದೇ ಇದ್ದರೂ ಗಮನಿಸುತ್ತಿದ್ದಾರೆ ಎಂದರು.

ಜನ ಆಕ್ರೋಶಗೊಂದಿದ್ದರೆ ಉಪ ಚುನಾವಣೆಯಲ್ಲಿ ನಮ್ಮನ್ನು ತಿರಸ್ಕರಿಸಬಹುದಿತ್ತಲ್ಲವೇ? ಮಾಜಿ ಮುಖ್ಯಮಂತ್ರಿಗಳ ಮಗನನ್ನೆ ಸೋಲಿಸಿದ್ದಾರೆ. ಮಾಜಿ‌ ಮುಖ್ಯಮಂತ್ರಿಯವರ ಕ್ಷೇತ್ರದಲ್ಲಿ ಬಿಜೆಪಿ ಸೋತಿದೆ. ಜನರಿಗೆ ನಮ್ಮ ಅಳಿತದ ಬೇಸರವಿದ್ದರೆ ಉಪ ಚುನಾವಣೆಯಲ್ಲಿ ತಿರಸ್ಕರಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದರು ಎಂದು ಹೇಳಿದರು.

ಬೆಲೆ ಏರಿಕೆ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿರುವುದು ವಿಪರ್ಯಾಸ. ಬೆಲೆ ಏರಿಕೆ ಯಾವ ಕಾರಣಕ್ಕೆ ಆಗಿದೆ. ಕೇಂದ್ರ ಸರ್ಕಾರ ನಮ್ಮ ತೆರಿಗೆ ಪಾಲನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಕೇಂದ್ರ ಸರ್ಕಾರದವರು ಏಕೆ ಅಡುಗೆ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ್ದಾರೆ? ಬೆಲೆ ಏರಿಸಿರುವುದು ಬಿಜೆಪಿಯವರಿಗೆ ಮತ್ತು ಜೆಡಿಎಸ್‌ನವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು‌

ಕೇಂದ್ರ ಸರ್ಕಾರ ನಮಗೆ ಸರಿಯಾಗಿ ಅನುದಾನ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ. ವಿಶೇಷ ಅನುದಾನ ಕೊಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದರು. ಒಂದು ರೂಪಾಯಿ ಕೊಟ್ಟಿಲ್ಲ. ರಾಜ್ಯದಿಂದ 20 ಸಾವಿರ ಜಿಎಸ್‌ಟಿ ಕಟ್ಟಿದರು, ಕೇವಲ 3 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ನಮಗೆ 12 ಸಾವಿರ ಕೋಟಿ. ರೂ. ಕೊಡಬೇಕಿತ್ತು, ಕಳೆದ ವರ್ಷವೂ ಕೊಟ್ಟಿಲ್ಲ. ಈವರ್ಷವೂ ನೀಡಿಲ್ಲ ನಮ್ಮ ತೆರಿಗೆ ಪಾಲನ್ನು ನೀಡುವಂತೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಇದನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ ಎಂದು ಬೇಸರಿಸಿದರು.

ದಲಿತರ ಅನುದಾನ ದಲಿತರಿಗೆ ಬಳಸುತ್ತಿದ್ದೇವೆ. 51 ಸಾವಿರ ಕೋಟಿ ರೂ. ಗ್ಯಾರಂಟಿಗೆ ಖರ್ಚು ಮಾಡಿದ್ದೇವೆ. ಯಾವುದೇ ತೆರಿಗೆ ಇಲ್ಲದೇ ಖರ್ಚು ಮಾಡಲಾಗಿದೆ. ಕೇಂದ್ರದವರು ಜಿಎಸ್‌ಟಿ ಹಣ ನೀಡಿಲ್ಲ ಎಂಬ ಕಾರಣಕ್ಕೆ  ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಆಗುವುದಿಲ್ಲ. ರಾಜ್ಯದ ಜನರಿಗೆ ಮೋಸ ಮಾಡಲು ಆಗುವುದಿಲ್ಲ ಎಂದು ಹೇಳಿದರು.

ಮೈಸೂರು ರಾಷ್ಟ್ರೀಯ ಹೆದ್ದಾರಿ ಆರಂಭವಾದ ಎರಡು ತಿಂಗಳಲ್ಲಿ 59 ಜನ ಸತ್ತಿದ್ದರು. ಇದಕ್ಕೆ ಕಾರಣ ಯಾರು? ರಾಜ್ಯ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿದ್ದರಿಂದ ಅಪಘಾತಗಳು ನಿಂತಿವೆ ಎಂದು ತಿಳಿಸಿದರು.

ಇದನ್ನೂ ಓದಿ:  Forgotten History: ಬ್ರಾಹ್ಮಣನೊಬ್ಬ ಮುಸ್ಲಿಂ ಸಾಮ್ರಾಜ್ಯದ ಸುಲ್ತಾನನಾದ ರೋಚಕ ಕಥೆ..!

ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತಡೆಗಟ್ಟುವ ಕುರಿತಂತೆ ಐಟಿಬಿಟಿ ಇಲಾಖೆ ಹಾಗೂ ವಿವಿಧ ಕಂಪನಿಗಳೊಂದಿಗೆ ಸಭೆ ನಡೆಸಿದ್ದೆನೆ. ಹೊಸ ಕಾನೂನು ತರಲು ತೀರ್ಮಾನಿಸಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಗೆ ಒಂದು ತಿಂಗಳು ಸಮಯ ನೀಡಲಾಗಿದೆ ಎಂದು ತಿಳಿಸಿದರು.

 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News