ಪಾಳು ಬಿದ್ದಿರುವ ರಾಜ್ಯದ ಪ್ರಥಮ ಮೊಲ ಸಾಕಾಣಿಕಾ ಕೇಂದ್ರ
State`s First Rabbit Breeding Center: ಹಲವು ದಶಕಗಳ ಹಿಂದೆ ರಾಜ್ಯದ ಹಲವು ಕಡೆ ಮೊಲ ಸಾಕಾಣಿಕೆ ಕೇಂದ್ರಗಳನ್ನ ಸರ್ಕಾರ ಸ್ಥಾಪಿಸಿತು. 1984 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಮೊಲ ಸಾಕಾಣಿಕಾ ಕೇಂದ್ರ ಪ್ರಾರಂಭವಾಯಿತು.
State's First Rabbit Breeding Center: ರಾಜ್ಯದ ಪ್ರಥಮ ಮೊಲ ಸಾಕಾಣಿಕಾ ಕೇಂದ್ರ ಎನಿಸಿಕೊಂಡಿದ್ದ, ಸುಮಾರು 25 ವರ್ಷಗಳ ಹಿಂದೆ ರಾಜ್ಯದಲ್ಲೇ ಪ್ರಥಮವಾಗಿ ಪ್ರಾರಂಭವಾದ ಶಿರಸಿಯ ಕೇಂದ್ರ ಇದೀಗ ಅನಾಥವಾಗುತ್ತಾ ಸಾಗಿದೆ. ರಾಜ್ಯದಲ್ಲಿ ಎರಡು ಕಡೆ ಮಾತ್ರ ಮೊಲ ಸಾಕಾಣಿಕೆ ಕೇಂದ್ರವಿದ್ದು, ಅತ್ಯಂತ ಸುಂದರವಾದ ಮೊಲ ಬೆಳೆಸಿ, ಅಭಿವೃದ್ದಿಪಡಿಸಲು ಇಲ್ಲಿ ಕಟ್ಟಡ ಸಹಿತ ವ್ಯವಸ್ಥೆಯಿದ್ದರೂ ಸರ್ಕಾರದ ವಿಶೇಷ ಅನುದಾನವಿಲ್ಲದೇ, ಅಧಿಕಾರಿಗಳು, ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಮೊಲ ಸಾಕಾಣಿಕೆ ಕೇಂದ್ರ ದಿನೇ ದಿನೇ ಸೊರಗುವಂತಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ...
ಹಲವು ದಶಕಗಳ ಹಿಂದೆ ರಾಜ್ಯದ ಹಲವು ಕಡೆ ಮೊಲ ಸಾಕಾಣಿಕೆ ಕೇಂದ್ರಗಳನ್ನ ಸರ್ಕಾರ ಸ್ಥಾಪಿಸಿತು. 1984 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಮೊಲ ಸಾಕಾಣಿಕಾ ಕೇಂದ್ರ ಪ್ರಾರಂಭವಾಯಿತು. ಸದ್ಯ ಹಾವೇರಿಯ ಬಂಕಾಪುರ ಬಿಟ್ಟರೆ, ಶಿರಸಿಯಲ್ಲಿ ಮಾತ್ರ ಈ ಸಾಕಾಣಿಕಾ ಕೇಂದ್ರವಿದೆ. ಮೊದಲು ಈ ಕೇಂದ್ರಕ್ಕೆ ಒಬ್ಬ ಪ್ರತ್ಯೇಕ ಸಿಬ್ಬಂದಿಯನ್ನ ನೇಮಿಸಲಾಗಿತ್ತು. ದಿನ ಕಳೆದಂತೆ 2003 ರಲ್ಲಿ ಈ ಕೇಂದ್ರದಲ್ಲಿ ನೇಮಕವಾಗಿದ್ದ ಸಿಬ್ಬಂದಿಯನ್ನ ಸರ್ಕಾರ ರದ್ದು ಮಾಡಿತು. ಈ ಕೇಂದ್ರ ಪಶುಸಂಗೋಪನಾ ಇಲಾಖಾ ಅಧೀನದಲ್ಲಿದ್ದು, ಇಲ್ಲಿಗೆ ಪ್ರತ್ಯೇಕ ಸಿಬ್ಬಂದಿಗಳು ಬೇಕಿದ್ದರೂ ಕೂಡ ಸಿಬ್ಬಂದಿ ನೇಮಕವಾಗಿಲ್ಲ.
ಸದ್ಯ ಪಶು ಇಲಾಖೆಯ ಡಿ ಗ್ರೂಪ್ ನ ಒಬ್ಬರೇ ಸಿಬ್ಬಂದಿ ಎಲ್ಲ ನಿರ್ವಹಿಸಬೇಕಿದೆ. ಇಲ್ಲಿ 5 ಎಕರೆ ಪ್ರದೇಶ ವಿಸ್ತೀರ್ಣದಲ್ಲಿ ಸಾಕಲಾಗುತ್ತಿದೆ. ಸದ್ಯ ಈ ಮೊಲ ಸಾಕಾಣಿಕೆ ಕೇಂದ್ರದಲ್ಲಿ ಅಂದಾಜು 50-60 ಮೊಲಗಳು ಇವೆ. ಸಿಬ್ಬಂದಿ ಹಾಗೂ ಅನುದಾನದ ಕೊರತೆಯಿಂದ ನಿರ್ವಹಣೆ ಕಷ್ಟವಾಗಿದ್ದು, ಮಾರುಕಟ್ಟೆಯ ಅಲಭ್ಯತೆಯಿಂದ ಮೊಲ ಸಾಕಾಣಿಕಾ ಕೇಂದ್ರ ಉತ್ತಮ ಸ್ಥಿತಿಯಲ್ಲಿ ಇಲ್ಲ ಎನ್ನುತ್ತಾರೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗಜಾನನ ಹೊಸ್ಮನಿ.
ಇದನ್ನೂ ಓದಿ- ಮದಗಜ ಕಾದಾಟ: ಎದುರಾಳಿಯ ದಂತ ಚುಚ್ಚಿ ಆನೆ ಸಾವು
ಶಿರಸಿಯ ದೊಡ್ನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೊಲ ಸಾಕಾಣಿಕಾ ಕೇಂದ್ರವಿದೆ. ಗ್ರಾಮೀಣ ಭಾಗದಲ್ಲಿದ್ದರೂ ಮೊದಲು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ. ಇಲ್ಲಿ ಮೊಲದ ದರ 150ರೂಪಾಯಿಯಿಂದ ಆರಂಭಗೊಂಡು 500ರೂಪಾಯಿ ತನಕವೂ ದರ ಹೋಗುತ್ತದೆ. ಮೊದಲು ಮೊಲಗಳ ಬೇಡಿಕೆ ಬಹಳ ಇದ್ದರೂ ಸದ್ಯ ಅಂತಹ ಬೇಡಿಕೆ ಇಲ್ಲವೆಂದು ಹೇಳಲಾಗುತ್ತಿದೆ.
ಚಂದದ ಪ್ರಾಣಿ ಮೊಲ ಅಂತ ಸಾಕುವವರು ಇದ್ದು, ತಿನ್ನುವವರು ಇರುವದರಿಂದ ಮೊಲ ಬೇಡಿಕೆ ಆಗಾಗ ಬರುತ್ತದೆ. ಮೊಲದ ಆಹಾರಕ್ಕೆ ಅನುದಾನವಿದೆ. ಆದ್ರೆ ಕಟ್ಟಡ ನಿರ್ವಹಣೆ ಹಾಗೂ ಇತರ ವಿಷಯಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಮೊಲವನ್ನು ಸಾಕುವ ಪಂಜರಗಳು ಸಂಪೂರ್ಣ ಶಿಥಿಲಗೊಂಡಿವೆ. ಇದು ಮೂಲತಃ ಅರಣ್ಯ ಇಲಾಖೆಯ ಗಾಂಬಟಾಣ ಜಾಗವಾಗಿದೆ. ಕಾಟಾಚಾರಕ್ಕೆ ಮೊಲ ಸಾಕಾಣಿಕೆ ಇರುವ ಕಾರಣ ಜಾಗದ ದುರುಪಯೋಗದ ಸಾಧ್ಯತೆಯೂ ಇದೆ. ಕಾರಣ ಜಾಗವನ್ನು ಸದ್ಬಳಕೆ ಮಾಡಿಕೊಳ್ಳುವತ್ತ ಸರ್ಕಾರ ಯೋಚಿಸಲಿ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಪರಮಾನಂದ ಹೆಗಡೆ.
ಇದನ್ನೂ ಓದಿ- ಯಾವುದೇ ಪಕ್ಷಕ್ಕೆ ಸೇರಿರಲಿ ಅವರ ಮೇಲೆ ಕ್ರಮಕ್ಕೆ ಹೇಳಿದ್ದೀನಿ: ಸಿಎಂ
ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸದ್ಯ ಶಿರಸಿಯಲ್ಲಿ ಮಾತ್ರ ಇಂತಹ ಕೇಂದ್ರವಿದ್ದು, ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಶಾಸಕರು, ಉಸ್ತುವಾರಿ ಸಚಿವರು ವಿಶೇಷ ಆಸಕ್ತಿ ವಹಿಸಬೇಕಿದೆ. ವಿಶೇಷ ಅನುದಾನವನ್ನು ಈ ಕೇಂದ್ರಕ್ಕೆ ನೀಡಿದಲ್ಲಿ ಇನ್ನೂ ಹೆಚ್ಚಿನ ಮೊಲಗಳ ತಳಿಗಳ ಸಾಕಾಣಿಕೆ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಬಹುದಾಗಿದೆ. ಆ ಮೂಲಕ ಭವಿಷ್ಯದಲ್ಲಿ ಈ ಕೇಂದ್ರದ ಜತೆಗೆ ಪಶು ಆಸ್ಪತ್ರೆ ಸಹ ಇಲ್ಲೇ ಅಭಿವೃದ್ದಿಪಡಿಸಬಹುದಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.