ನವದೆಹಲಿ: ರಾಜೀನಾಮೆ ನೀಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ಘೋಷಿಸಿದ್ದ ನಿರ್ಧಾರವನ್ನು ಪ್ರಶ್ನಿಸಿದ್ದ ಬಂಡಾಯ ಶಾಸಕರ ಅರ್ಜಿಯ ತುರ್ತು ವಿಚಾರಣೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.


COMMERCIAL BREAK
SCROLL TO CONTINUE READING

ರಾಜ ಜನ್ಮ ಭೂಮಿ ವಿವಾದದ ಕುರಿತು ಪ್ರತಿದಿನ ವಿಚಾರಣೆ ನಡೆಯುತ್ತಿದ್ದು, ಪ್ರಸ್ತುತ ಅನರ್ಹ ಶಾಸಕರ ಅರ್ಜಿ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ. ಆದರೆ ಶೀಘ್ರವೇ ವಿಚಾರಣೆ ದಿನಾಂಕವನ್ನು ತಿಳಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ತಿಳಿಸಿದೆ.


ಸ್ಪೀಕರ್ ರಮೇಶ್ ಕುಮಾರ್ ಜುಲೈ 25 ರಂದು ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಹಾಗೂ ಆರ್. ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು. ಅಲ್ಲದೆ, ಜುಲೈ 28 ರಂದು ಸ್ವತಂತ್ರ್ಯ ಅಭ್ಯರ್ಥಿ ಹೆಚ್. ನಾಗೇಶ್ ಹೊರತುಪಡಿಸಿ ಉಳಿದ ಎಲ್ಲಾ 14 ಶಾಸಕರನ್ನು ತಾವು ಅನರ್ಹಗೊಳಿಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು.


ಈ ಹಿನ್ನೆಲೆಯಲ್ಲಿ ಅನರ್ಹಗೊಂಡಿದ್ದ ಎಲ್ಲಾ 17 ಶಾಸಕರು, ಈ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಇಂದು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದಾರೆ.