ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಚುನಾವಣಾ ಆಯುಕ್ತರಾದ ಸುನೀಲ್ ಆರೋರಾ ಮತ್ತು ಅಶೋಕ್ ಲವಾಸ ಒಳಗೊಂಡ ತಂಡ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದೆ.


COMMERCIAL BREAK
SCROLL TO CONTINUE READING

ಚುನಾವಣಾ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ತಂಡ ರಾಜ್ಯಕ್ಕೆ ಮೂರು ದಿನಗಳ ಭೇಟಿ ನೀಡಲಿರುವ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ನೇತೃತ್ವದ ತಂಡ ಏಪ್ರಿಲ್ 4 ರಿಂದ ಏಪ್ರಿಲ್ 6ರವರೆಗೆ ರಾಜ್ಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ರಾಜ್ಯ ಪೋಲೀಸ್ ಮಹಾನಿರ್ದೇಶಕರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ಸಿದ್ಧತೆ ಕುರಿತು ಪರಿಶೀಲನೆ ನಡೆಸಲಿದೆ. ಅಲ್ಲದೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಕೂಡ ಸಭೆ ನಡೆಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.


ಈ ಹಿಂದೆ ಜನವರಿ 31 ಮತ್ತು ಫೆಬ್ರವರಿ 1ರಂದು ಓಂ ಪ್ರಕಾಶ್ ರಾವತ್ ರಾಜ್ಯಕ್ಕೆ ಭೇಟಿ ನೀಡಿದ್ದರು.