ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ ಆರೋಪಿ ಬಂಧಿಸಿದ NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು  ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ.

Written by - Prashobh Devanahalli | Last Updated : Apr 13, 2024, 12:03 PM IST
  • ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌
  • NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ ಆರೋಪಿ ಬಂಧಿಸಿದ NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ title=

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು  ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು. ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ ಎಂದರು. 400 ಕ್ಕೂ ಹೆಚ್ಚು ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ  ಕಾರ್ಯತಂತ್ರ ಎಂದರು.

ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು. 

ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ : ಹಿಂದೂಗಳ ಹೆಸರಲ್ಲಿ ರೂಮ್ ಬಾಡಿಗೆ ಪಡೆದಿದ್ದ ಶಂಕಿತ ಉಗ್ರರು 

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್  ಅವರು  ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಇದನ್ನೂ ಓದಿ: Haveri-Gadag Lok Sabha Constituency: ಬಿಜೆಪಿ ಕೋಟೆಯನ್ನು ಬೇಧಿಸುತ್ತಾ ಈ ಬಾರಿ 'ಕೈ' ಪಕ್ಷ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News