ಬೆಂಗಳೂರು: ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಫಲನೀಡಿದೆ. ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ಎಲ್ಲ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳು ಈ ವೇಳೆ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. #Chandrayaan3Landing… pic.twitter.com/lRBQTEgv8R
— CM of Karnataka (@CMofKarnataka) August 24, 2023
ಬೆಂಗಳೂರಿನ ಪೀಣ್ಯದಲ್ಲಿರುವ ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ, ಇಸ್ರೋ ದೂರ ಮಾಪನ ಪಥಶೋಧಕ ಮತ್ತು ಕಾರ್ಯಾಚರಣೆಯ ಜಾಲ ಮಿಷನ್ ನಿಯಂತ್ರಣ ಸಂಕೀರ್ಣಕ್ಕೆ ಗುರುವಾರ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯನವರು ವಿಜ್ಞಾನಿಗಳನ್ನು ಅಭಿನಂದಿಸಿದರು.
ಇದನ್ನೂ ಓದಿ: ಶಿವಮೊಗ್ಗ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ನಾಯಕರ ಸೇರ್ಪಡೆ
ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡೆ.@isro ವಿಜ್ಞಾನಿಗಳ ದಶಕಗಳ ಪರಿಶ್ರಮವು ನನ್ನಂತ ಕೋಟ್ಯಂತರ ಭಾರತೀಯರ ಕನಸನ್ನು ನನಸಾಗಿಸಿದೆ.
ಚಂದ್ರನ ಮೇಲೆ ಭಾರತದ ಪತಾಕೆ ಹಾರಿಸಿ ದೇಶವಾಸಿಗಳು ಹೆಮ್ಮೆಪಡುವಂತೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ… pic.twitter.com/Gz4EAdUTvS
— Siddaramaiah (@siddaramaiah) August 23, 2023
ಚಂದ್ರಯಾನ-3 ಯಶಸ್ವಿಯಾದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತಾಗಿದೆ’ ಎಂದು ಶ್ಲಾಘಿಸಿದರು.
ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು. ರಾಜ್ಯ ಸರ್ಕಾರದಿಂದ ಕೂಡ ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.
ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ.ಇಂಥದ್ದೊಂದು… pic.twitter.com/QpSB5EETlO
— Siddaramaiah (@siddaramaiah) August 23, 2023
ಇದನ್ನೂ ಓದಿ: ರಾಯಚೂರಿನ ಸಿರವಾರನಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್
ಚಂದ್ರಯಾನ 3 ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO)ಯ ಮಹಾತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದೆ. ಈ ಮೂಲಕ ಭಾರತವು ಹೊಸ ದಾಖಲೆಯೊಂದನ್ನು ಬರೆದಿದೆ. ಆಗಸ್ಟ್ 23ರಂದು ಸಂಜೆ ಚಂದಿರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.