ಚಾಮರಾಜನಗರ: ಮೂಗುರು ತ್ರಿಪುರ ಸುಂದರಿ ದೇವಾಲಯದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿಶೇಷ ತಂಡ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ 5ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Chanakya Niti: ಈ ಕೆಟ್ಟ ಅಭ್ಯಾಸವಿದ್ದರೆ ಇಂದೇ ಬಿಟ್ಟುಬಿಡಿ, ಇಲ್ಲದಿದ್ದರೆ ಜೀವನವೇ ಹಾಳಾಗುತ್ತದೆ


ಬಿಸಲವಾಡಿ ಗ್ರಾಮದಲ್ಲಿ ಟೆಂಟ್ ಹಾಕಿಕೊಂಡು ವಾಸಿಸುತ್ತಿದ್ದ ಐವರಿಗೂ ಹೆಚ್ಚು ಮಂದಿಯನ್ನು ಸಶಸ್ತ್ರವಾಗಿ ಸಜ್ಜುಗೊಂಡ ಮೈಸೂರಿನ ವಿಶೇಷ ಪೊಲೀಸ್ ಪಡೆ ಬಂಧಿಸಿದೆ.


ಅಲೆಮಾರಿ ಜನಾಂಗದವರಂತೆ ವೇಷ ಹಾಕಿಕೊಂಡು ಊರ ಹೊರಗೆ ಟೆಂಟ್ ಹಾಕಿಕೊಂಡು  ವಾಸಿಸುತ್ತಿದ್ದ ಇವರು ಮೂಗೂರು ತ್ರಿಪುರ ಸುಂದರಿ ದೇವಾಲಯ ಸೇರಿದಂತೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ದೇಗುಲ ಕಳವು ಕೇಸ್‌ಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.


ಇದನ್ನೂ ಓದಿ: Parrot: ಗಿಣಿ ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ


ಕೆರೆ, ಪೊದೆಗಳಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅಜ್ಞಾತ ಸ್ಥಳಕ್ಕೆ ವಶಕ್ಕೆ ಪಡೆದವರನ್ನು  ಕರೆದೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ