ಗಾಂಧಿ ಹಾಗೂ ಗ್ಯಾಂಡಿ ಶಬ್ದದ ಮಧ್ಯೆ ವ್ಯತ್ಯಾಸವಿದೆ: ರಾಹುಲ್ ಟೀಕಿಸಿದ ಬಿಜೆಪಿ

ಚುನಾವಣೆ ಬಂದಾಗ ಮಾತ್ರ ತಾವು ಹಿಂದೂಗಳು ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳುತ್ತಾರೆ.

Written by - Zee Kannada News Desk | Last Updated : Nov 13, 2021, 01:51 PM IST
  • ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು? ಎಂದು ಪ್ರಶ್ನಿಸಿದ್ದ ರಾಹುಲ್ ಗಾಂಧಿ
  • ಚುನಾವಣೆ ಬಂದಾಗ ಮಾತ್ರ ತಾವು ಹಿಂದೂಗಳು ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳುತ್ತಾರೆ
  • ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರೋಧವೇ ಕಾಂಗ್ರೆಸ್ ಡಿಎನ್‌ಎ ಎಂದು ಟೀಕಿಸಿದ ಬಿಜೆಪಿ
ಗಾಂಧಿ ಹಾಗೂ ಗ್ಯಾಂಡಿ ಶಬ್ದದ ಮಧ್ಯೆ ವ್ಯತ್ಯಾಸವಿದೆ: ರಾಹುಲ್ ಟೀಕಿಸಿದ ಬಿಜೆಪಿ   title=
ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು

ಬೆಂಗಳೂರು: ಹಿಂದುತ್ವ ಹಾಗೂ ಹಿಂದೂ ಧರ್ಮದ(Hinduism) ವಿರೋಧವೇ ಕಾಂಗ್ರೆಸ್ ಪಕ್ಷದ ಡಿಎನ್‌ಎ ಎಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಹಿಂದೂ ಧರ್ಮ, ಹಿಂದುತ್ವ ಎರಡು ಬೇರೆ ಬೇರೆ ವಿಷಯಗಳು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ # ಹಿಂದೂವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಿಸಿ ಶನಿವಾರ ಸರಣಿ ಟ್ವೀಟ್ ಮಾಡಿದೆ.

‘ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರೋಧವೇ ಕಾಂಗ್ರೆಸ್ ಡಿಎನ್‌ಎ(Congress DNA). ಚುನಾವಣೆ ಬಂದಾಗ ಮಾತ್ರ ತಾವು ಹಿಂದೂಗಳು ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳುತ್ತಾರೆ. ಚುನಾವಣೆ ಹೊರತುಪಡಿಸಿ ಉಳಿದ ಸಮಯದಲ್ಲಿ ಧರ್ಮದ್ವೇಷದಲ್ಲೇ ಕಾಲ ಕಳೆಯುತ್ತಾರೆ’ ಅಂತಾ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಆತ್ಮವಂಚಕ ದಲಿತ ವಿರೋಧಿ ಸಿದ್ದರಾಮಯ್ಯರ ಮಾತು ನಂಬಿಕೆಗೆ ಯೋಗ್ಯವೇ?: ಬಿಜೆಪಿ

‘ಗಾಂಧಿ ಹಾಗೂ ಗ್ಯಾಂಡಿ ಶಬ್ದದ ಮಧ್ಯೆ ವ್ಯತ್ಯಾಸವಿದೆ. ಆದರೆ ಹಿಂದೂ ಧರ್ಮ(Hinduism) ಹಾಗೂ ಹಿಂದುತ್ವದ ಮಧ್ಯೆ ವ್ಯತ್ಯಾಸವಿಲ್ಲ. ಆಲೂಗೆಡ್ಡೆಯಿಂದ ಚಿನ್ನ ತೆಗೆಯಲು ಹೊರಟವರಿಗೆ ಮಾತ್ರ ಇಂತಹ ವ್ಯತ್ಯಾಸ ಕಾಣಲು ಸಾಧ್ಯ’ ಎಂದು ಬಿಜೆಪಿ ಟೀಕಿಸಿದೆ.

BJP Twitt

‘ಟಿಪ್ಪು ಮತಾಂಧನಲ್ಲ ಎನ್ನುವ ಸಿದ್ದರಾಮಯ್ಯ(Siddaramaiah) ಹೇಳಿಕೆ ಹಾಗೂ ಹಿಂದುತ್ವ ಬೇರೆ ಹಿಂದೂ ಧರ್ಮ ಬೇರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆ ಕಾಂಗ್ರೆಸ್ ಪಕ್ಷದ ಹಿಂದೂ ದ್ವೇಷಕ್ಕೆ ಉದಾಹರಣೆಗಳಾಗಿವೆ’ ಎಂದು ಬಿಜೆಪಿ(Karnataka BJP) ಮತ್ತೊಂದು ಟ್ವೀಟ್ ನಲ್ಲಿ ಟೀಕಿಸಿದೆ.  

ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನ ‘ಜನ್ ಜಾಗರಣ ಅಭಿಯಾನ’(Digital Campaign Jan Jagran Abhiyan) ಉದ್ಘಾಟಿಸಿದ್ದ ರಾಹುಲ್ ಗಾಂಧಿ, ‘ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು? ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ದರೆ, ಏಕೆ ಒಂದೇ ಹೆಸರಿಲ್ಲ? ಇವೆರಡು ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗದ ಅನುಮತಿ ಬೇಕಾಗಿದೆ: ಬಸವರಾಜ್ ಬೊಮ್ಮಾಯಿ

‘ಕಾಂಗ್ರೆಸ್(Congress) ಸಿದ್ಧಾಂತ ಜೀವಂತವಾಗಿದ್ದು, ಆದರೆ ಅದನ್ನು ಮರೆ ಮಾಡಲಾಗಿದೆ. ಇಂದು RSS ಮತ್ತು ಬಿಜೆಪಿ ದ್ವೇಷದ ಸಿದ್ಧಾಂತವು ನಮಗೆ ಇಷ್ಟವಾಗಲಿ ಅಥವಾ ಇಲ್ಲದಿರಲಿ. ಕಾಂಗ್ರೆಸ್ ಪಕ್ಷದ ಪ್ರೀತಿ, ವಾತ್ಸಲ್ಯ ಮತ್ತು ರಾಷ್ಟ್ರೀಯತೆಯ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳಬೇಕು’ ಎಂದು ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News