ಚಿಕ್ಕೋಡಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾವ ಕಾರಣಕ್ಕಾಗಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಅವರು ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ದೇಶದುದ್ದಕ್ಕೂ ತೊಡಗಿಸಿಕೊಂಡ ಹಿರಿಯರಾಗಿದ್ದಾರೆ ಯಾವ ಯೋಚನೆ ಮಾಡಿ ಹೇಳಿದ್ದಾರೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಎಲ್ ಸಂತೋಷ ಹೇಳಿಕೆಗೆ ಸಾಫ್ಟ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ 'ಬಿಎಲ್ ಸಂತೋಷ ಬಹಳ ಅರ್ಥಪೂರ್ಣವಾಗಿ ಮಾತನಾಡುತ್ತಾರೆ ಅತ್ಯಂತ ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದಾರೆ ಎಂದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಊಹಾಪೋಹವಾಗಿದೆ ಯಾವುದೇ ರೀತಿಯ ನಾಯಕತ್ವ ಬದಲಾವಣೆ ಇಲ್ಲ ಎಂದು ತಿಳಿಸಿದರು.Vegetable price: ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ ನಿಂಬೆ ದರ: ಇಲ್ಲಿದೆ ಇಂದಿನ ತರಕಾರಿಗಳ ಬೆಲೆ


ಬಿ ಎಲ್ ಸಂತೋಷ ಅವರು ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸುತ್ತೇವೆ.ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿರುವುದೇ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ಅವರು ಹೇಳಿದ್ದಾರೆ. ಇದೆ ವೇಳೆ ದೆಹಲಿ ನಗರಪಾಲಿಕೆ ಚುನಾವಣೆಯ ನಿದರ್ಶನ ನೀಡಿದ ಅವರು ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರಿಗೆ ನಿವೃತ್ತಿ ನೀಡುವ ಮೂಲಕ ಹೊಸ ಕಾರ್ಯಕರ್ತರಿಗೆ ಪಕ್ಷದ ಟಿಕೆಟ್ ನ್ನು ಹಂಚಲಾಗಿದೆ. ಇದರಿಂದ ಪಕ್ಷವು ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಇಂತಹ ಪ್ರಯೋಗಗಳು ಬಿಜೆಪಿಯಲ್ಲಿ ಮಾತ್ರ ನಡೆಯಲು ಸಾಧ್ಯ ಎಂದು ಅವರು ಹೇಳಿದರು.


ಇದನ್ನೂ ಓದಿ: Karnataka Government : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಸಾರ್ವತ್ರಿಕ ವರ್ಗಾವಣೆಗೆ ಅಧಿಕೃತ ಆದೇಶ!


ಇನ್ನು ಮುಂದುವರೆದು ಮಾತನಾಡಿದ ಅವರು ನಾಯಕತ್ವ ಬದಲಾವಣೆ ಎನ್ನುವುದು 'ಬಿಜೆಪಿಗೆ ಒಂದು ರೀತಿ ಶಕ್ತಿ ಇದ್ದಹಾಗೆ, ಈ ಪ್ರಯೋಗವು ಈಗಾಗಲೇ ಗುಜರಾತಿನಲ್ಲಿ ಯಶಸ್ವಿಯಾಗಿದೆ ಎಂದು ಅವರು ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ನಗರದ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಪ್ರಮುಖರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.