ಬೆಂಗಳೂರು: ಅಧಿಕಾರಿಗಳ ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರಾಕರಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಕೆಂಪೇಗೌಡರು ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ"


ಪೋಸ್ಟಿಂಗ್ ಹಾಕಲು ದುಡ್ಡು ಬೇಡಿಕೆ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಈ ಆರೋಪವನ್ನು ಸಚಿವ ರಾಮಲಿಂಗಾ ರೆಡ್ಡಿ ನಿರಾಕರಿಸಿದ್ದಾರೆ.


ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.


ಎಚ್ ಡಿ ಕೆ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಅವರು, ವರ್ಗಾವಣೆ ದಂಧೆ ಆರೋಪವನ್ನು ತಳ್ಳಿ ಹಾಕಿದರು.


ಇದೇ ಸಂದರ್ಭದಲ್ಲಿ ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣಕಾಸು ಕೊರತೆ ವಿಚಾರವಾಗಿ ಮಾತನಾಡಿ, ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಸಂಖ್ಯೆಯಲ್ಲಿ ಪ್ರಯಾಣ ಮಾಡಿದ್ದಾರೆ. ಅದರ ವೆಚ್ಚ ಮಾಹಿತಿ ನೀಡಿಲಿದೆ‌. ಈ ನಿಟ್ಟಿನಲ್ಲಿ ವೇತನ ಸಮಸ್ಯೆ ಆಗುವುದಿಲ್ಲ. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ ಎಂದರು.


ಪಂಚ ಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು.


ಇದನ್ನೂ ಓದಿ: ಕಂಪ್ಲಿ ಪಟ್ಟಣದಲ್ಲಿ ವಿವಿಧಡೆ ದಾಳಿ: ನಾಲ್ಕು ಕಿಶೋರ ಕಾರ್ಮಿಕರ ರಕ್ಷಣೆ


ಈ‌ ಕುರಿತು ಟ್ವೀಟ್ ಮಾಡಿದ್ದ ಅವರು, ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಆರೋಪಿಸಿದ್ದರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ