ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯ ಆಡಳಿತ(BJP Govt.)ಕ್ಕೂ ತಾಲಿಬಾನ್ ಆಡಳಿತಕ್ಕೂ ಯಾವುದೇ ವ್ಯತ್ಯಾಸವಿಲ್ಲವೆಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕಿತ್ತೂರಿನ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ದಂಪತಿಗೆ ಪೊಲೀಸರು ಪುಷ್ಪವೃಷ್ಠಿ ಮಾಡಿರುವ ವಿಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಮೊನ್ನೆ ಗುಂಡು ಹಾರಿಸಿದಾಗ ಪೊಲೀಸರು ಮೂಕಪ್ರೇಕ್ಷಕರು, ಇಂದು ಬಿಜೆಪಿ ಶಾಸಕರಿಗೆ ಪುಷ್ಪಾರ್ಚಕರು!’ ಅಂತಾ ಕಾಂಗ್ರೆಸ್(Congress) ವ್ಯಂಗ್ಯವಾಡಿದ್ದು ‘ಉತ್ತರ ಪ್ರದೇಶ, ಬಿಹಾರದಂತೆಯೇ ಪೊಲೀಸರನ್ನು ರಾಜ್ಯದ ಬಿಜೆಪಿ ಸರ್ಕಾರ ತನ್ನ ತನ್ನ ಕಾಲಾಳುಗಳನ್ನಾಗಿ ಮಾಡಿಕೊಂಡಿದೆ’ ಅಂತಾ ಆರೋಪಿಸಿದೆ.


ಇದನ್ನೂ ಓದಿ: ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಶಾಪವಾಗಿದೆ: ಡಿ.ಕೆ.ಶಿವಕುಮಾರ್ ಆಕ್ರೋಶ


ಪೊಲೀಸರಿಂದಲೇ ಪುಷ್ಪವೃಷ್ಠಿ ಮಾಡಿಸಿಕೊಂಡಿರುವ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡ(Mahantesh Doddagoudar)ರ ವಿರುದ್ಧ ಏಕೆ ಇನ್ನೂ ಕ್ರಮ ಕೈಗೊಂಡಿಲ್ಲ. ಇದಕ್ಕೆ ಉತ್ತರಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.


ರಾಜ್ಯದಲ್ಲಿರುವುದು ತಾಲಿಬಾನ್ ಆಡಳಿತ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ


ಶೋಕಾಸ್ ನೋಟಿಸ್ ಜಾರಿ


ಬೈಲಹೊಂಗಲದಲ್ಲಿರುವ ಬಿಜೆಪಿ ಶಾಸಕ(BJP MLA) ಮಹಾಂತೇಶ ದೊಡ್ಡಗೌಡರ ಮನೆಗೆ ತೆರಳಿ ಪುಷ್ಪವೃಷ್ಠಿ ಮಾಡಿದ್ದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿಯವರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ ಅಂತಾ ಹೇಳಲಾಗಿದೆ. ಬೈಲಹೊಂಗಲದ ಡಿವೈಎಸ್ಪಿ ಶಿವಾನಂದ ಕಟಗಿ, ಬೈಲಹೊಂಗಲ ಠಾಣೆ ಸಿಪಿಐ ಯು.ಬಿ.ಮಲ್ಲನ್ನವರ, ಪೇದೆ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.