ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವಂತೆ ಯಾವುದೇ ಸೂಚನೆ ನೀಡಿಲ್ಲ

ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡಿದ್ದೆ. ಹೀಗಿರುವಾಗ ನಾನು ಇಂಥ ಸೂಚನೆ ನೀಡಲು ಸಾಧ್ಯವೇ?- ಸಿಎಂ ಕುಮಾರಸ್ವಾಮಿ

Last Updated : Sep 27, 2018, 07:51 AM IST
ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವಂತೆ ಯಾವುದೇ ಸೂಚನೆ ನೀಡಿಲ್ಲ title=

ಮಂಡ್ಯ: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಬಕಾರಿ ಇಲಾಖೆಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪಷ್ಟ ಪಡಿಸಿದರು.

ಮಂಡ್ಯದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸೂಚನೆಯ ಮೇರೆಗೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯಲು ಪರವಾನಗಿ ನೀಡಲಾಗಿತ್ತಿರುವ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವಿಷಯ ಸತ್ಯಕ್ಕೆ ದೂರವಾದುದು. 

ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡಿದ್ದೆ. ಹೀಗಿರುವಾಗ ನಾನು ಇಂಥ ಸೂಚನೆ ನೀಡಲು ಸಾಧ್ಯವೇ ಎಂದು ಅವರು ಪತ್ರಕರ್ತರನ್ನು ಪ್ರಶ್ನಿಸಿದರು.

Trending News