ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಯಾದಗಿರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷ ಪೂರೈಸಲಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.

Last Updated : Jun 21, 2019, 11:50 AM IST
ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಯಾದಗಿರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ title=
File Image

ಯಾದಗಿರಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ. ನಾನೇ ಅವಧಿಯನ್ನು ಪೂರ್ಣಗೊಳಿಸಲಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯಾದಗಿರಿಯಲ್ಲಿ ತಿಳಿಸಿದರು.

ಮಧ್ಯಂತರ ಚುನಾವಣೆ ನಿಶ್ಚಿತ, ಈ ಬಗ್ಗೆ ಸಂಶಯವೇ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ನೀಡಿರುವ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಯಾದಗಿರಿಯಲ್ಲಿಂದು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬುದು ಮಾಜಿ  ವೈಯಕ್ತಿಕ ಹೇಳಿಕೆಯಾಗಿದೆ. ಇದರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ ಸಿಎಂ ಕುಮಾರಸ್ವಾಮಿ, ನಾಲ್ಕು ವರ್ಷ ಈ ಸರ್ಕಾರ ಸುಭದ್ರವಾಗಿರುತ್ತದೆ. ಮೈತ್ರಿ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗಬೇಕು. ಅದೇ ಮೈತ್ರಿ ಧರ್ಮ ಎಂದಿದ್ದಾರೆ.

Trending News