ಹುಬ್ಬಳ್ಳಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಸಾಕಷ್ಟು ಗೊಂದಲಕ್ಕೆ ಕಾರಣವಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ಸಚಿವರು  ಕರ್ನಾಟಕಕ್ಕೆ ಬರುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವರು ನಮ್ಮ ರಾಜ್ಯಕ್ಕೆ ಬರುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು, ಮಹಾರಾಷ್ಟ್ರ  ಕಾರ್ಯದರ್ಶಿಗೆ ಲಿಖಿತವಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಹುಬ್ಬಳ್ಳಿ ಏರಪೋರ್ಟ್ ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗಿರುವ ವಾತಾವರಣದಲ್ಲಿ ಮಹಾರಾಷ್ಟ್ರ ಸಚಿವರು ಬರುವುದು ಬೇಡ. ಇಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಈ ಸಂದರ್ಭದಲ್ಲಿ ರಾಜ್ಯಕ್ಕೆ ಬರುವುದು ಬೇಡ ಎಂದು ಹೇಳಿದ್ದಾರೆ. ಈ ಹೊತ್ತಿನಲ್ಲಿ ಮಹಾರಾಷ್ಟ್ರ ಸಚಿವರು ಇಲ್ಲಿಗೆ ಬರುತ್ತೇನೆ ಎಂದು  ಹೇಳುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 


ಇದನ್ನೂ ಓದಿ : Vegetable Price Today: ತರಕಾರಿ ಬೆಲೆ ಮತ್ತೆ ಹೆಚ್ಚಳ!! ಈಗಲೇ ತಿಳಿಯಿರಿ ಇಂದಿನ ದರ ವಿವರ


ಮಹಾರಾಷ್ಟ್ರ ಕರ್ನಾಟಕ ಜನರ ನಡುವೆ ಸಾಮರಸ್ಯ ಇದೆ. ಇದರ ನಡುವೆ ಗಡಿವಿವಾದ ಕೂಡಾ ಇದೆ. ಗಡಿ ವಿವಾದ ಕರ್ನಾಟಕದ ಪ್ರಕಾರ ಮುಗಿದು ಹೋಗಿರುವ ಅಧ್ಯಾಯ. ಆದರೆ, ಮಹಾರಾಷ್ಟ್ರ ಪದೇ ಪದೇ ಖ್ಯಾತೆ ತೆಗೆದು ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಇನ್ನು, ಮಹಾರಾಷ್ಟ್ರ ಸಿಎಂ ಕರ್ನಾಟಕಕ್ಕೆ  ಬರುವ ಸಾಹಸ ಮಾಡಿದರೆ,  ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.  ಇನ್ನು  ಪ್ರತಿಬಂಧಕ ಕಾಯ್ದೆ ಜಾರಿ ಮಾಡೋ ವಿಚಾರದ  ಬಗ್ಗೆ ಮಾತನಾಡಿದ ಅವರು, ಹಿಂದೆ ಈ ತರಹದ ಸಂದರ್ಭ ಎದುರಾದಾಗ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಆ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  


ಇದನ್ನೂ ಓದಿ : ಕಾಲ್ನಡಿಗೆಯೊಂದಿಗೆ ಅಂಜನಾದ್ರಿ ಬೆಟ್ಟದತ್ತ ಹೊರಟ ಮಾಲಾಧಾರಿಗಳು


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.