ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಶಾಸಕ, ಸಚಿವರಾಗಿ ಸುಮಾರು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದರು. ಇದೇ ವೇಳೆ ಜೆಡಿಎಸ್, ಕಾಂಗ್ರೆಸ್ ನ ನಾನಾ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

Written by - Prashobh Devanahalli | Edited by - Bhavishya Shetty | Last Updated : Mar 15, 2023, 09:11 PM IST
    • ಸುಮಾರು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದೇನೆ.
    • ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ.
    • ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್ title=
ST Somasekhar

ಬೆಂಗಳೂರು: ಸಹಕಾರ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು.

ಚಿಕ್ಕಬಸ್ತಿ, ದೊಡ್ಡಬಸ್ತಿ, ರಾಮಸಂದ್ರ, ಕೆಂಚನಪುರ, ಸೂಲಿಕೆರೆ, ಬೈರೋಹಳ್ಳಿ, ಕೊಮ್ಮಘಟ್ಟ ಸೇರಿದಂತೆ ಹಲವೆಡೆ ಬೂತ್ ಮಟ್ಟದ ಸಭೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.

ಇದನ್ನೂ ಓದಿ:  Auspicious Navpancham Yog: 30 ವರ್ಷಗಳ ಬಳಿಕ ತ್ರಿವಳಿ 'ನವಪಂಚಮ ಯೋಗ' ನಿರ್ಮಾಣ, 3 ರಾಶಿಗಳ ಜನರು ಎರಡೂ ಕೈಗಳಿಂದ ಹಣ ಬಾಚಿಕೊಳ್ಳಲಿದ್ದಾರೆ!

ಶಾಸಕ, ಸಚಿವರಾಗಿ ಸುಮಾರು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದರು. ಇದೇ ವೇಳೆ ಜೆಡಿಎಸ್, ಕಾಂಗ್ರೆಸ್ ನ ನಾನಾ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ  ಪ್ರವಾಸಿ ತಾಣವಾಗಿಸುವ ಧ್ಯೇಯ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು  ಇಂದು ಬಸವೇಶ್ವರ ವೃತ್ತದ ಸಮೀಪದ ತಿನುಸುಕಟ್ಟೆ ಬಳಿ ಶ್ರೀ ಬಸವೇಶ್ವರ ಪ್ರತಿಮೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿದರು.

ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ. ಬಸವಣ್ಣನವರ ವಿಚಾರಧಾರೆಗಳು ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ. 12 ನೇ ಶತಮಾನದಲ್ಲಿ ಬಸವಣ್ಣನವರು ಸನ್ಮಾರ್ಗವನ್ನು ತೋರಿದ್ದಾರೆ. ವಿಶ್ವದ ಮೊದಲ ಸಂಸತ್ತು ಎಂದೇ ಕರೆಸಿಕೊಳ್ಳುವ ಅನುಭವ ಮಂಟಪ ಸ್ಥಾಪಿಸಿದರು. ಅನುಭವ ಮಂಟಪದಲ್ಲಿ ಚರ್ಚಿಸಲಾಗುತ್ತಿದ್ದ ಎಲ್ಲ ವಿಷಯಗಳು ಇಂದಿಗೂ ಪ್ರಸ್ತುತ.  ಅಸಮಾನತೆ, ಲಿಂಗಭೇದ, ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ವಿರೋಧಿಸಿದ್ದರು. ಈ ವಿಷಯಗಳ ಬಗ್ಗೆ ಸಮಾಜದಲ್ಲಿ ಸ್ಪಷ್ಟತೆ ದೊರೆಯುವ ತನಕ ಬಸವಣ್ಣನವರೂ ಪ್ರಸ್ತುತರಾಗಿಯೇ ಇರುತ್ತಾರೆ. ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸುವ ಕೆಲಸವಾಗಬೇಕು ಎಂದರು.

ಇದನ್ನೂ ಓದಿ: Auspicious Navpancham Yog: 30 ವರ್ಷಗಳ ಬಳಿಕ ತ್ರಿವಳಿ 'ನವಪಂಚಮ ಯೋಗ' ನಿರ್ಮಾಣ, 3 ರಾಶಿಗಳ ಜನರು ಎರಡೂ ಕೈಗಳಿಂದ ಹಣ ಬಾಚಿಕೊಳ್ಳಲಿದ್ದಾರೆ!

ನಮ್ಮ ದೇಶಕ್ಕೆ ಚರಿತ್ರೆ ಇದೆ, ಚಾರಿತ್ರ್ಯ ಬೇಕಾಗಿದೆ, ಸಂಘರ್ಷವಿದೆ, ಸಮನ್ವಯ ಬೇಕಾಗಿದೆ.  ಸಾಮಾಜಿಕ ಪರಿವರ್ತನೆಯಾಗುವಂತಹ, ವೈಚಾರಿಕವಾಗಿ  ಮುನ್ನಡೆಯಲು ಬಸವ ತತ್ವಗಳು ಪ್ರೇರಣೆ ನೀಡಲಿದೆ ಎಂದರು.

ಕೆ.ಎಲ್.ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್,  ಅಭಯ್ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News