ಉಪಚುನಾವಣೆ ಬಳಿಕ ಮೈತ್ರಿ ಪ್ರಶ್ನೆಯೇ ಇಲ್ಲ: ಜೆಡಿಎಸ್ ವರಿಷ್ಠ ದೇವೇಗೌಡ

ರಾಜ್ಯ ಉಪಚುನಾವಣೆ ಬಳಿಕ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.  ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Last Updated : Dec 3, 2019, 01:05 PM IST
ಉಪಚುನಾವಣೆ ಬಳಿಕ ಮೈತ್ರಿ ಪ್ರಶ್ನೆಯೇ ಇಲ್ಲ: ಜೆಡಿಎಸ್ ವರಿಷ್ಠ ದೇವೇಗೌಡ title=
Representational image

ಬೆಳಗಾವಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಡಿಸೆಂಬರ್ 5ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. 105 ಶಾಸಕರ ಬಲ ಹೊಂದಿದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಪಕ್ಷ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ನಿಂದ ದೂರದಲ್ಲಿದೆ. ಸರ್ಕಾರದ ಬಹುಮತಕ್ಕಾಗಿ ಈ ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಸ್ಥಾನಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಏತನ್ಮಧ್ಯೆ ಬಿಜೆಪಿಗೆ ಒಂದೊಮ್ಮೆ 8 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದಿದ್ದರೆ....? ರಾಜ್ಯದಲ್ಲಿ ಮತ್ತೊಮ್ಮೆ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ವಿಶೇಷವೆಂದರೆ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಜೆಡಿಎಸ್ ಬೆಂಬಲ ಅತ್ಯಗತ್ಯ. ಆದರೆ ಉಪಚುನಾವಣೆ ಬಳಿಕ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ನಮ್ಮ ಪಕ್ಷ ಈಗಾಗಲೇ ಸಾಕಷ್ಟು ನೋವುಂಡಿದೆ. ಉಪಚುನಾವಣೆ ಬಳಿಕ ಉಭಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರಲ್ಲದೇ, ಉಪ ಚುನಾವಣೆ ಬಳಿಕ ಜೆಡಿಎಸ್(JDS) ಬಿಜೆಪಿ/ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಸರ್ಕಾರ ರಚಿಸಲಿದೆ ಎಂಬ ಊಹಾಪೋಹಗಳನ್ನು ಆಧರಿಸಿದ ವರದಿಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ನಾವು ಕಾಂಗ್ರೆಸ್(Congress) ಜೊತೆ ಕೈಜೋಡಿಸದಿದ್ದರೆ ಯಡಿಯೂರಪ್ಪ ಸರ್ಕಾರ ಹೇಗೆ ಪತನಗೊಳ್ಳಲಿದೆ ಎಂದು ಪ್ರಶ್ನಿಸಿದ ದೇವೇಗೌಡರು, ಬಿಜೆಪಿ(BJP) 105 ಸ್ಥಾನಗಳನ್ನು ಹೊಂದಿದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ವಿಧಾನಸಭೆಯಲ್ಲಿ ನಾವು ಯಾವುದೇ ಪಕ್ಷಕ್ಕೆ ಬೆಂಬಲ ನೀಡದೆ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇವೆ ಎಂದರು.

Trending News