ಬೆಂಗಳೂರು: ಸಿದ್ದರಾಮಯ್ಯ ಅವರಂತಹ ಅಲ್ಪಸಂಖ್ಯಾತರ ದ್ರೋಹಿ‌ ಇನ್ನೊಬ್ಬರಿಲ್ಲವೆಂದು ರಾಜ್ಯ ಬಿಜೆಪಿ(BJP Karnataka) ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಮಾಜಿ ಸಚಿವ ರೋಷನ್ ಬೇಗ್ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತವೆಂದು ಹೇಳಿದ್ದ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.


Siddaramaiah)ನವರು ಬಡ ಅಲ್ಪಸಂಖ್ಯಾತರ ಶ್ರಮದ ಗಳಿಕೆಯ‌ನ್ನು ಅಣಕ ಮಾಡುತ್ತಿದ್ದಾರೆ. ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಜಮೀರ್ ಅಹ್ಮದ್ ಬೆಂಬಲಿಸುತ್ತಿರುವ ನಿಮಗೆ ಈ ಲೂಟಿಯಲ್ಲಿ ಪಾಲಿತ್ತೇ ಸಿದ್ದರಾಮಯ್ಯ?. ಭ್ರಷ್ಟ ಕಾಂಗ್ರೆಸ್ ಶಾಸಕನ ಮೇಲಿನ ದಾಳಿ ರಾಜಕೀಯ ಪ್ರೇರಿತ ದಾಳಿ ಎನ್ನುವ ಸಿದ್ದರಾಮಯ್ಯನವರೇ ಐಎಂಎ ಪ್ರಕರಣವನ್ನು ತನಿಖೆ ನಡೆಸಿದ್ದು ನಿಮ್ಮದೇ ಮೈತ್ರಿ ಸರ್ಕಾರ. ನಿಮ್ಮದೇ ಪಕ್ಷದ ಶಾಸಕ ರೋಶನ್ ಬೇಗ್ ಬಂಧನವಾಗಿತ್ತು. ಆಗೆಲ್ಲ ಮೌನವಾಗಿದ್ದ ನೀವು ಈಗ ಜಮೀರ್ ಅಹ್ಮದ್(Zameer Ahmed) ವಿಚಾರದಲ್ಲೇಕೆ ಸಿಡಿಯುತ್ತಿದ್ದೀರಿ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


ಮೇಕೆದಾಟು ಯೋಜನೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಬಸವರಾಜ್ ಬೊಮ್ಮಾಯಿ


Congress) ಪಕ್ಷಕ್ಕೆ ಮಾತ್ರ. ಇದಕ್ಕೆ ದೇಶ ಹಲವಾರು ಬಾರಿ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಎಸಿಬಿ ಸ್ಥಾಪನೆ ಮಾಡಿ ಅದನ್ನು ರಾಜಕೀಯ ದ್ವೇಷಕ್ಕೆ ಬಳಸಿಕೊಂಡಿದ್ದನ್ನು ನಾಡಿನ ಜನತೆ ಇನ್ನೂ ಮರೆತಿಲ್ಲ. ಭ್ರಷ್ಟ ಕಾಂಗ್ರೆಸ್‌ ಶಾಸಕನ ಪರವಾಗಿ ಭ್ರಷ್ಟ ಕಾಂಗ್ರೆಸ್‌ ಅಧ್ಯಕ್ಷ ವಕಾಲತ್ತು ವಹಿಸುತ್ತಿದ್ದಾರೆ. ಒಂದು ವರ್ಗವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆʼ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್(DK Shivakumar) ಭ್ರಷ್ಟರಲ್ಲೂ ಜಾತಿ-ಧರ್ಮ ಅರಸುತ್ತಿದ್ದಾರೆ. ಭ್ರಷ್ಟರಲ್ಲೂ ವರ್ಗ, ಜಾತಿ ಹುಡುಕುತ್ತಿರುವುದು ದುರಂತವೇ ಸರಿ! ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದೆ.


Karnataka Cabinet Expansion: ಡಿಸಿಎಂ ಹುದ್ದೆ ಕ್ಯಾನ್ಸಲ್, ಬಿ.ವೈ.ವಿಜಯೇಂದ್ರಗೆ ಮಂತ್ರಿಸ್ಥಾನವಿಲ್ಲ!


COMMERCIAL BREAK
SCROLL TO CONTINUE READING

2 ವರ್ಷವಾಯ್ತು ಎಂಬ ಕಾರಣಕ್ಕೆ ಐಎಂಎ ಪ್ರಕರಣದ ತನಿಖೆಯನ್ನು ಈಗ ನಡೆಸಬಾರದೇ ಡಿ.ಕೆ.ಶಿವಕುಮಾರ್!? ಎಂದು ಪ್ರಶ್ನಿಸಿರುವ ಬಿಜೆಪಿ, ಬಡವರು ಹತ್ತಾರು ವರ್ಷ ಶ್ರಮವಹಿಸಿ ಗಳಿಸಿದ ಉಳಿಕೆಯನ್ನು ಜಮೀರ್ ಕಬಳಿಸಿದಾಗ ನೀವ್ಯಾಕೆ ಮೌನವಾಗಿದ್ದಿರಿ? ನಿಮಗೂ ಅದರಲ್ಲೀ ಪಾಲು ಇತ್ತೇ?. ಉಪ್ಪು ತಿಂದವರು ನೀರು ಕುಡಿಯಲೇಬೇಕು ಅಂತಾ ಕುಟುಕಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ